ಕಾಬೂಲ್: ತಾಲಿಬಾನ್ ಉಗ್ರರ ಹತೋಟಿಯಲ್ಲಿರುವ ಅಫ್ಘಾನಿಸ್ತಾನದಲ್ಲಿ ಈಗಾಗಲೇ ಅರಾಜಕತೆ ಉಂಟಾಗಿದ್ದು, ಇದರ ಬೆನ್ನಲ್ಲೇ ಅಲ್ಲಿನ ಪ್ರಮುಖ ಏರ್ಪೋರ್ಟ್ ಕಾಬೂಲ್ನ ಪಕ್ಕದಲ್ಲೇ ಬಾಂಬ್ ಸ್ಫೋಟಗೊಂಡಿದೆ. ಇದಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಿಲಿಟರಿ ಪಡೆ ನಿಖರ ಮಾಹಿತಿ ಹಂಚಿಕೊಂಡಿದೆ.
ಲಭ್ಯವಾಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಸ್ಫೋಟದಿಂದಾಗಿ 13 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಮೂವರು ಅಮೆರಿಕದ ಯೋಧರು ಸೇರಿದಂತೆ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾಗಿ ವರದಿಯಾಗಿದೆ. ಕಾಬೂಲ್ ಏರ್ಪೋರ್ಟ್ ಬಳಿ ಸ್ಫೋಟವಾಗುತ್ತಿದ್ದಂತೆ ಈ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಬರೋನ್ ಹೋಟೆಲ್ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
-
We can confirm an explosion outside Kabul airport. Casualties are unclear at this time. We will provide additional details when we can.
— John Kirby (@PentagonPresSec) August 26, 2021 " class="align-text-top noRightClick twitterSection" data="
">We can confirm an explosion outside Kabul airport. Casualties are unclear at this time. We will provide additional details when we can.
— John Kirby (@PentagonPresSec) August 26, 2021We can confirm an explosion outside Kabul airport. Casualties are unclear at this time. We will provide additional details when we can.
— John Kirby (@PentagonPresSec) August 26, 2021
ಕಾಬೂಲ್ ವಿಮಾನ ನಿಲ್ದಾಣದಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇಂದು ಬೆಳಗ್ಗೆ ಅಮೆರಿಕ ಸೇರಿದಂತೆ ಅನೇಕ ರಾಷ್ಟ್ರಗಳು ಎಚ್ಚರಿಕೆ ನೀಡಿದ್ದವು. ಇದರ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ. ಕಾಬೂಲ್ ಏರ್ಪೋರ್ಟ್ ಮೇಲೆ ತಾಲಿಬಾನಿಗಳು ಈಗಾಗಲೇ ಹಿಡಿತ ಸಾಧಿಸಿದ್ದು, ಇಲ್ಲಿಂದ ಪಲಾಯನ ಮಾಡಲು ಅನೇಕರು ಏರ್ಪೋರ್ಟ್ನಲ್ಲಿ ಉಪಸ್ಥಿತರಿದ್ದರು.
ಪೆಂಟಗಾನ್ ವಕ್ತಾರ್ ಜಾನ್ ಕಿರ್ಬೈ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕಾಬೂಲ್ ಏರ್ಪೋರ್ಟ್ ಬಳಿ ಬಾಂಬ್ ಸ್ಫೋಟಗೊಂಡಿರುವುದು ನಿಜ ಎಂದು ಹೇಳಿದ್ದಾರೆ. ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ, ಈ ಸ್ಥಳದಲ್ಲಿ ಫೈರಿಂಗ್ ಕೂಡ ನಡೆಸಲಾಗಿದೆ. ಇದರಿಂದ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿರುವವರ ಸಂಖ್ಯೆಯಲ್ಲಿ ಏರಿಕೆಯಾಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
ತಾಲಿಬಾನ್ ಉಗ್ರರ ಅಟ್ಟಹಾಸ ಹೆಚ್ಚಾಗಿರುವ ಸಮಯದಿಂದಲೂ ಸುಮಾರು 9 ಸಾವಿರಕ್ಕೂ ಅಧಿಕ ಅಫ್ಘಾನಿಸ್ತಾನದ ನಾಗರಿಕರು ವಿವಿಧ ದೇಶಗಳಿಗೆ ತೆರಳಿದ್ದಾರೆ. ಕೆಳೆದ ಕೆಲ ದಿನಗಳಿಂದ ಕಾಬೂಲ್ ಏರ್ಪೋರ್ಟ್ ಮೇಲೆ ತಾಲಿಬಾನಿಗಳು ಹಿಡಿತ ಸಾಧಿಸಿದ್ದಾರೆ.