ಕಾಬೂಲ್: ಅಪ್ಘಾನಿಸ್ತಾನದ ಕಾಬೂಲ್ನ ಶಾಲೆಯೊಂದರ ಬಳಿ ಶನಿವಾರ ಬಾಂಬ್ ದಾಳಿಯಾಗಿದ್ದು, ಕನಿಷ್ಠ 30 ಜನ ಮೃತಪಟ್ಟಿದ್ದು, 52 ಜನ ಗಾಉಗೊಂಡಿದ್ದಾರೆ ಎಂದು ವರದಿಯಾಗಿದೆ.
ಮೃತರಲ್ಲಿ ವಿದ್ಯಾರ್ಥಿಗಳು ಇದ್ದಾರೆ ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ 52 ಜನರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಲ್ಲಿಯೂ ವಿದ್ಯಾರ್ಥಿಗಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ವೈದ್ಯಾಧಿಕಾರಿಗಳು ಹೇಳಿದ್ದಾರೆ. ಘಟನೆಯ ಬೆನ್ನಲ್ಲೇ ಕಾಬೂಲ್‌ನಲ್ಲಿ ಭಾರಿ ಭದ್ರತೆ ಕಲ್ಪಿಸಲಾಗಿದೆ. ಈವರೆಗೆ ದಾಳಿಯ ಹೊಣೆಯನ್ನು ಯಾವ ಉಗ್ರ ಸಂಘಟನೆಗಳು ಒಪ್ಪಿಕೊಂಡಿಲ್ಲ.