ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನ ರಾಜಧಾನಿಯಲ್ಲಿ ಇಂದು ಬೆಳಗ್ಗೆ ಸರಣಿ ಸ್ಫೋಟ ಸಂಭವಿಸಿದ್ದು, ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಕನಿಷ್ಠ 4 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವಾರು ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಕಾಬೂಲ್‌ನಲ್ಲಿ ಪೊಲೀಸ್ ವಾಹನಕ್ಕೆ ಜೋಡಿಸಲಾದ ಮ್ಯಾಗ್ನೆಟಿಕ್ ಬಾಂಬ್ ಸ್ಫೋಟಗೊಂಡು ಅಧಿಕಾರಿಗಳು ಮೃತಪಟ್ಟಿದ್ದಾರೆ ಮತ್ತು ಹಲವಾರು ನಾಗರಿಕರಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲಿಬಾನ್ ಮತ್ತು ಅಫ್ಘಾನ್ ಸರ್ಕಾರದ ನಡುವೆ ಕತಾರ್‌ನಲ್ಲಿ ಮಾತುಕತೆ ನಡೆಯುತ್ತಿರುವಾಗಲೇ ದಾಳಿಗಳು ನಡೆಯುತ್ತಿದ್ದು, ದಶಕಗಳ ಯುದ್ಧವನ್ನು ಕೊನೆಗೊಳಿಸಬಹುದಾದ ಶಾಂತಿ ಒಪ್ಪಂದವನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ.
ಕಾಬೂಲ್‌ನಲ್ಲಿ ನಡೆದ ದಾಳಿಯ ಹೊಣೆಯನ್ನು ಯಾರೂ ಕೂಡ ವಹಿಸಿಕೊಂಡಿಲ್ಲ. ಇತ್ತೀಚಿನ ತಿಂಗಳುಗಳಲ್ಲಿ ನಡೆದ ಅನೇಕ ದಾಳಿಗಳ ಜವಾಬ್ದಾರಿಯನ್ನು ಇಸ್ಲಾಮಿಕ್ ಸ್ಟೇಟ್ ವಹಿಸಿಕೊಂಡಿದೆ.