ಬೀಜಿಂಗ್: ಮಹಾಮಾರಿ ಕೊರೊನಾ ವೈರಸ್ಗೆ ಚೀನಾದಲ್ಲಿ ಸಾವಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗ್ತಿದ್ದು, ನಿತ್ಯ ನೂರಾರು ಅಮಾಯಕರು ತಮ್ಮ ಜೀವ ಕಳೆದುಕೊಳ್ಳುತ್ತಿದ್ದಾರೆ.
ನಿನ್ನೆ ಒಂದೇ ದಿನ 100ಕ್ಕೂ ಹೆಚ್ಚು ಜನರು ಈ ಮಹಾಮಾರಿಗೆ ಬಲಿಯಾಗಿದ್ದು, ಇದೀಗ ಸಾವಿನ ಸಂಖ್ಯೆ 1100ರ ಗಡಿ ದಾಟಿದೆ. ಹೊಸದಾಗಿ 1,638ಮಂದಿಗೆ ಈ ಸೋಂಕು ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 33,400ಕ್ಕೆ ಏರಿಕೆಯಾಗಿದೆ.
ಮಾರಣಾಂತಿಕ ಕೊರೊನಾ ವೈರಸ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೋವಿಡ್-19 ಎಂದು ಅಧಿಕೃತವಾಗಿ ಹೆಸರಿಟ್ಟಿದ್ದು, ಇದೇ ವೇಳೆ, ವಿಶ್ವ ಆರೋಗ್ಯ ಸಂಸ್ಥೆ ನೇತೃತ್ವದ ತಜ್ಞ ವೈದ್ಯರ ತಂಡವೊಂದು ಚೀನಾಕ್ಕೆ ಆಗಮಿಸಿದ್ದು ರೋಗ ನಿಯಂತ್ರಣಕ್ಕೆ ಸೂಕ್ತ ನೆರವು ನೀಡುತ್ತಿದೆ.