ವೆಲ್ಲಿಂಗ್ಟನ್ : ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ದೇಶದಲ್ಲಿ ಘೋಷಿಸಿರುವ ಲಾಕ್ ಡೌನ್ ಇನ್ನೂ ಒಂದು ವಾರ ಮುಂದುವರೆಯಲಿದೆ ಎಂದು ನ್ಯೂಝಿಲೆಂಡ್ ಪ್ರಧಾನಿ ಜಸಿಂಡಾ ಆರ್ಡೆರ್ನ್ ಘೋಷಿಸಿದ್ದಾರೆ.
ಕಳೆದ ನಾಲ್ಕು ವಾರಗಳಿಂದ ಅಗತ್ಯ ವಸ್ತುಗಳ ಖರೀದಿಗೆ ಹೊರತು ಜನರು ಮನೆಯಿಂದ ಹೊರ ಬರುವುದನ್ನು ನಿರ್ಬಂಧಿಸಲಾಗಿತ್ತು. ಆದರೆ, ಇನ್ನೊಂದು ವಾರದ ಬಳಿಕ ನಿರ್ಮಾಣ ಕಾರ್ಮಿಕರು, ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಮತ್ತು ಇತರ ಪ್ರಮುಖ ವ್ಯವಹಾರಗಳನ್ನು ನಡೆಸುವವರು ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಬಹುದು ಎಂದು ಅವರು ತಿಳಿಸಿದ್ದಾರೆ.
ಮುಂದಿನ ವಾರದಿಂದ ಕೆಲ ಶಾಲಾ, ಕಾಲೇಜುಗಳನ್ನು ತೆರೆಯಲು ಅವಕಾಶ ನೀಡಲಾಗುತ್ತದೆ. ಆದರೆ, ಪೋಷಕರು ತಮ್ಮ ಮಕ್ಕಳು ಮನೆಯಲ್ಲೇ ಕೂತು ಅಭ್ಯಾಸ ಮಾಡುವಂತೆ ಪ್ರೋತ್ಸಾಹಿಸಿ ಎಂದಿದ್ದಾರೆ.