ಜಕಾರ್ತಾ: ಜನವರಿ 16 ರಂದು ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ 56 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಪ್ರಾಕೃತಿಕ ವಿಕೋಪದಲ್ಲಿ ಗಾಯಗೊಂಡ 826 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರಲ್ಲಿ ಬಹುಪಾಲು ಸುಲವೇಸಿ ಪ್ರಾಂತ್ಯದ ಮಮುಜಿ ಪ್ರದೇಶದವರಾಗಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹಾಗಾಗಿ, ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಇಂಡೋನೇಷ್ಯಾದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿ (ಬಿಎನ್‌ಪಿಬಿ) ಮಾಹಿತಿ ನೀಡಿದೆ.
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಸ್ಗೆ ಬೆಂಕಿ: 8 ಜನರ ಸಾವು, 20 ಕ್ಕೂ ಹೆಚ್ಚು ಜನರಿಗೆ ಗಾಯ
ಸುಲವೇಸಿ ಪ್ರಾಂತ್ಯದಲ್ಲಿ ಶುಕ್ರವಾರ ರಿಕ್ಟರ್ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಭೂಕಂಪವಾಗಿತ್ತು. ಪರಿಣಾಮ ರಸ್ತೆಗಳು, ಮನೆಗಳು, ಬಹುಮಹಡಿ ಕಟ್ಟಡಗಳು, ಆಸ್ಪತ್ರೆಗಳು, ವಿದ್ಯುತ್ ಕಂಬಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ. ಈ ಪ್ರಾಂತ್ಯದಲ್ಲಿ ಅಧಿಕಾರಿಗಳು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ.