ಬೀಜಿಂಗ್(ಚೀನಾ): ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದ ಲಕ್ಸಿಯನ್ ಕೌಂಟಿಯಲ್ಲಿ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6 ರಷ್ಟು ತೀವ್ರತೆ ದಾಖಲಾಗಿದೆ ಎಂದು ಚೀನಾ ಭೂಕಂಪನ ಜಾಲ ಕೇಂದ್ರ (CENC) ಮಾಹಿತಿ ನೀಡಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರಿಗೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮುಂಜಾನೆ 4.33 ಕ್ಕೆ ಅವಘಡ ಸಂಭವಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭೂಕಂಪದ ಕೇಂದ್ರವನ್ನು 29.2 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 105.34 ಡಿಗ್ರಿ ಪೂರ್ವ ರೇಖಾಂಶದಲ್ಲಿ ಇತ್ತು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ನೆರೆಯ ಕುತಂತ್ರಿಗೆ ಭಾರಿ ಹೊಡೆತ ; ಡಾಲರ್ ಎದುರು ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದ ಪಾಕ್‌ನ ರೂಪಾಯಿ
ಸುದ್ದಿ ತಿಳಿದ ಕೂಡಲೇ ವಿಪತ್ತು ನಿರ್ವಹಣಾ ಘಟಕ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಘಟನೆಯಲ್ಲಿ ಎಷ್ಟು ಸಾವು ನೋವು ಸಂಭವಿಸಿದೆ ಎಂಬುದು ಗೊತ್ತಾಗಿಲ್ಲ. ಇದೇ ಪ್ರಾಂತ್ಯದಲ್ಲಿ 2008ರಲ್ಲಿ ಸಂಭವಿಸಿದ ಭೂಕಂಪದಲ್ಲಿ ಸಾವಿರಾರು ಜನ ಸಾವನ್ನಪ್ಪಿದ್ದರು.