ಢಾಕಾ: ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಏಳು ಜನರು ಮೃತಪಟ್ಟು, ಹಲವರು ಗಾಯಗೊಂಡ ಘಟನೆ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಭಾನುವಾರ ನಡೆದಿದೆ. ಗ್ಯಾಸ್ ಸಿಲಿಂಡರ್ ಸ್ಪೋಟ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ನಗರದ ಮೋಘಾ ಬಝಾರ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಏಳು ಕಟ್ಟಡಗಳು ಮತ್ತು 3 ಸಾರಿಗೆ ಬಸ್ಗಳಿಗೂ ಸ್ಪೋಟದಿಂದ ಹಾನಿಯಾಗಿದೆ ಎಂದು ಢಾಕಾ ಪೊಲೀಸ್ ಕಮಿಷನರ್ ಶಫೀಕುಲ್ ಇಸ್ಲಾಂ ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ಘಟನೆ ನಡೆದಿರುವ ಸಾಧ್ಯತೆಯಿದೆ. ನಿಜವಾಗಿಯೂ ಯಾವ ಕಾರಣಕ್ಕೆ ಸ್ಪೋಟ ಸಂಭವಿಸಿತು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ ಎಂದು ಅಗ್ನಿಶಾಮಕ ದಳದ ಮುಖ್ಯಸ್ಥರ ಸಜ್ಜಾದ್ ಹುಸೈನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಸಮುದ್ರದಲ್ಲಿ ಹುಟ್ಟುಹಬ್ಬದ ಸೆಲ್ಫಿ ತಂದ ದುರಂತ: ನಾಲ್ವರು ಯುವಕರು ನೀರುಪಾಲು
ಹತ್ತಿರದ ಕಟ್ಟಡದ ನೆಲ ಮಹಡಿಯಲ್ಲಿರುವ ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳು ಮತ್ತು ಮಹಡಿಯ ಶೋ ರೂಂನಲ್ಲಿ ಎಸಿ ಇದ್ದವು. ಘಟನಾ ಸ್ಥಳದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್‌ಗಳೂ ಇದ್ದವು. ಹಾಗಾಗಿ, ಸ್ಪೋಟದ ಕಾರಣ ಕಂಡು ಹಿಡಿಯಲು ತನಿಖೆ ಪ್ರಾರಭಿಸಲಾಗಿದೆ ಎಂದು
ಮಾಧ್ಯಮಗಳ ಮಾಹಿತಿ ಪ್ರಕಾರ, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಪಾದಚಾರಿಗಳು ಮತ್ತು ಬಸ್ಗಳಲ್ಲಿ ತೆರಳುತ್ತಿದ್ದ ಪ್ರಯಾಣಿಕರು ಸೇರಿದ್ದಾರೆ. ಮೂರು ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗ್ತಿದೆ. ಸುಟ್ಟ ಗಾಯಗಳಾಗಿದ್ದ ಕೆಲವು ಚೇತರಿಸಿಕೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.