ಬಾಗ್ದಾದ್: ಶನಿವಾರ ತಡರಾತ್ರಿ ಬಾಗ್ದಾದ್‌ನ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿರುವ ಪರಿಣಾಮ 15 ರೋಗಿಗಳು ದಾರುಣವಾಗಿ ಮೃತಪಟ್ಟಿದ್ದಾರೆ. ಈ ಆಕ್ಸಿಜನ್ ಸಿಲಿಂಡರ್ಗಳು ಕೋವಿಡ್ ರೋಗಿಗಳಿಗೆ ಪೂರೈಕೆಯಾಗುತ್ತಿದ್ದವು ಎಂದು ತಿಳಿದುಬಂದಿದೆ.
ಈ ದುರ್ಘಟನೆಯಲ್ಲಿ 15 ರೋಗಿಗಳು ಸಾವನ್ನಪ್ಪಿ, 36 ಮಂದಿ ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಈ ಸಂದರ್ಭದಲ್ಲಿ 120 ರೋಗಿಗಳಿದ್ದರು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಅವಘಡದಲ್ಲಿ ಉಂಟಾದ ಹಾನಿ ಬಗ್ಗೆ ಇರಾಕ್ ಅಧಿಕಾರಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಆಸ್ಪತ್ರೆಯೊಳಗೆ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಳ್ಳಲು ಆಮ್ಲಜನಕದ ಸಿಲಿಂಡರ್ ಸ್ಫೋಟವೇ ಕಾರಣವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ: ಇಂಡೊನೇಷ್ಯಾದಲ್ಲಿ ಜಲಾಂತರ್ಗಾಮಿ ನೌಕೆ ಮುಳುಗಡೆ: 53 ಸಿಬ್ಬಂದಿ ಜಲ ಸಮಾಧಿ