ETV Bharat / international

ಚೀನಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ: 8 ಮಂದಿ ದುರ್ಮರಣ - ಡಾಲಿಯಾನ್​​ನಲ್ಲಿ ಅಗ್ನಿ ಅವಘಡ

ಚೀನಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

Gas explosion in Chinese apartment building kills 8
ಚೀನಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ: 8 ಮಂದಿ ದುರ್ಮರಣ
author img

By

Published : Sep 11, 2021, 11:21 AM IST

ಬೀಜಿಂಗ್(ಚೀನಾ): ಈಶಾನ್ಯ ಚೀನಾದ ವಸತಿ ಕಟ್ಟಡವೊಂದರಲ್ಲಿ ಎಲ್​ಪಿಜಿ ಗ್ಯಾಸ್ ಸಿಲಿಂಡರ್​​​​​​ ಸ್ಫೋಟಗೊಂಡು ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆಂದು ಅಲ್ಲಿನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗ್ಯಾಸ್​ ಸೋರಿಕೆಯಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲಿಯಾನಿಂಗ್ ಪ್ರಾಂತ್ಯದ ಕರಾವಳಿ ನಗರವಾದ ಡಾಲಿಯಾನ್​​ನಲ್ಲಿ ಸ್ಫೋಟದಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಐದು ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ನಿಖರ ಕಾರಣ ಏನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ಉಲ್ಲೇಖಿಸಿದೆ.

ಇದನ್ನೂ ಓದಿ: ಮೇಘಾಲಯದಲ್ಲಿ ಸಿಆರ್​ಪಿಎಫ್​ ಕಾರ್ಯಾಚರಣೆ: 2 IED, ಮೂರು Detonator ಜಪ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.