ಲಾಹೋರ್: 2008ರ ಮುಂಬೈ ದಾಳಿಯ ಮಾಸ್ಟರ್ಮೈಂಡ್ ಹಫೀಸ್ ಸಯೀದ್, ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ತೀರ್ಪಿನ ನಂತರ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 16 ರಿಂದ ಪ್ಯಾರಿಸ್‌ನಲ್ಲಿ ಎಫ್‌ಎಟಿಎಫ್ ಸಭೆ ನಡೆಯಲಿದೆ. ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾಗಿರುವ ಪಾಕಿಸ್ತಾನವನ್ನ ಕಪ್ಪುಪಟ್ಟಿಗೆ ಸೇರಿಸಬೇಕೇ ಅಥವಾ ಬೇಡವೇ ಎಂದು ಅವತ್ತೇ ನಿರ್ಧರಿಸಲಾಗುತ್ತದೆ.
ಭಯೋತ್ಪಾದನಾ ವಿರೋಧಿ ನ್ಯಾಯಾಲಯದಲ್ಲಿ ಬುಧವಾರ ನಡೆದ ವಿಚಾರಣೆಯಲ್ಲಿ ಹಫೀಜ್ ಸಯೀದ್ ಪರ ವಕೀಲರು ಲಾಹೋರ್ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದರು. ಎಫ್‌ಎಟಿಎಫ್‌ನ ಒತ್ತಡದಿಂದಾಗಿ ಹಫೀಜ್ ಸಯೀದ್ಗೆ ಶಿಕ್ಷೆ ವಿಧಿಸಲಾಗಿದೆ ಹೊರತು ಬೇರೆ ಯಾವುದೇ ಕಾರಣಗಳಿಲ್ಲ ಎಂದು ವಕೀಲರು ಆರೋಪಿಸಿದ್ದಾರೆ. 26/11 ಮುಂಬೈ ದಾಳಿಯ ಮಾಸ್ಟರ್ಮೈಂಡ್ ಹಫೀಸ್ ಸಯೀದ್ ವಿರುದ್ಧ ಎರಡು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೀಡಿರೋ ಪ್ರಕರಣಗಳಲ್ಲಿ ಐದು ವರ್ಷಗಳ ಕಾಲ ಶಿಕ್ಷೆಗೊಳಗಾಗಿದ್ದರು.
ಹೆಚ್ಚುವರಿಯಾಗಿ ಪ್ರತಿ ಪ್ರಕರಣದಲ್ಲೂ ಅವನಿಗೆ 15 ಸಾವಿರ ರೂ.ಗಳ ದಂಡ ವಿಧಿಸಲಾಗಿದೆ. ಎಟಿಎ ಸೆಕ್ಷನ್ 11-ಎಫ್ (2) ಮತ್ತು 11-ಎನ್ ಅಡಿಯಲ್ಲಿ ಆತನಿಗೆ ಶಿಕ್ಷೆ ವಿಧಿಸಲಾಗಿದೆ. ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ತನ್ನ ವಿರುದ್ಧ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಕ್ಲಬ್ ಮಾಡುವಂತೆ ಮಾಡಿದ ಮನವಿ ಅಂಗೀಕರಿಸಿ ತೀರ್ಪನ್ನು ಪ್ರಕಟಿಸಿದ ಬಳಿಕ ಈ ಬೆಳವಣಿಗೆಗಳು ನಡೆದಿವೆ.
ಪಂಜಾಬ್ ಪ್ರಾಂತ್ಯದ ವಿವಿಧ ನಗರಗಳಲ್ಲಿ ಭಯೋತ್ಪಾದಕ ಹಣಕಾಸು ಆರೋಪದ ಮೇಲೆ ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಇಲಾಖೆ ಹಫೀಜ್ ಸಯೀದ್ ಮತ್ತು ಆತನ ಸಹಚರರ ವಿರುದ್ಧ 23 ಎಫ್‌ಐಆರ್ ದಾಖಲಿಸಿ ಜುಲೈ 17ರಂದು ಬಂಧಿಸಿತ್ತು. ಅವರನ್ನು ಲಾಹೋರ್‌ನ ಕೋಟ್ ಲಖ್‌ಪತ್ ಜೈಲಿನಲ್ಲಿರಿಸಲಾಗಿದೆ. ಆದರೆ, 26/11 ಭಯೋತ್ಪಾದಕ ದಾಳಿ ಪ್ರಕರಣದ ವಿರುದ್ಧ ಆತನನ್ನು ಮೊದಲು ಶಿಕ್ಷೆಗೊಳಪಡಿಸಲಾಯಿತು. ಇಸ್ಲಾಮಾಬಾದ್ ಮತ್ತು ಎಫ್‌ಎಟಿಎಫ್ ಮೇಲೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಒತ್ತಡದ ಮಧ್ಯೆ ಅವರ ಅಪರಾಧ ಸಾಬೀತಾಗಿದೆ.