ETV Bharat / international

ಭಯೋತ್ಪಾದನೆ, ಉಗ್ರರಿಗೆ ಬೆಂಬಲ ನೀಡುವವರ ವಿರುದ್ಧ ಜಗತ್ತು ಒಗ್ಗಟ್ಟಾಗಿ ನಿಲ್ಲಬೇಕು: ಭಾರತ

ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ದಾಳಿಯನ್ನು ಭಾರತ ಕಟುವಾಗಿ ಖಂಡಿಸಿದ್ದು, 'ಭಯೋತ್ಪಾದನೆ ಮತ್ತು ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡುವವರ ವಿರುದ್ಧ ಜಗತ್ತು ಒಟ್ಟಾಗಿ ನಿಲ್ಲಬೇಕು' ಎಂದು ಹೇಳಿದೆ.

author img

By

Published : Aug 27, 2021, 7:10 AM IST

bomb blasts in Kabul
ಕಾಬೂಲ್​ ಆತ್ಮಾಹುತಿ ಬಾಂಬ್​ ದಾಳಿ

ಕಾಬೂಲ್: ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಗುರುವಾರ ಸಂಜೆ ಸಂಭವಿಸಿದ ಅವಳಿ ಆತ್ಮಾಹುತಿ ಬಾಂಬ್‌ ದಾಳಿಯಲ್ಲಿ ಕನಿಷ್ಠ 60 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಈಗಾಗಲೇ ಉಗ್ರ ಸಂಘಟನೆ ಐಸಿಸ್-ಕೆ ಒಪ್ಪಿಕೊಂಡಿದೆ. ಈ ಕೃತ್ಯವನ್ನು ಭಾರತ ಖಂಡಿಸಿದ್ದು, ಭಯೋತ್ಪಾದನೆ ವಿರುದ್ಧ ಜಗತ್ತು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಕರೆ ನೀಡಿದೆ.

  • We strongly condemn the bomb blasts in Kabul today. Extend our heartfelt condolences to the families of the victims of this terrorist attack.
    Press Release : https://t.co/Zk4FG7OdSl

    — Arindam Bagchi (@MEAIndia) August 26, 2021 " class="align-text-top noRightClick twitterSection" data=" ">

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಟ್ವೀಟ್ ಮಾಡಿದ್ದು, 'ಈ ಭಯೋತ್ಪಾದಕ ದಾಳಿಗೆ ಬಲಿಯಾದವರ ಕುಟುಂಬಗಳಿಗೆ ನಮ್ಮ ಸಾಂತ್ವನವಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ಭಯೋತ್ಪಾದನೆ ಮತ್ತು ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡುವವರ ವಿರುದ್ಧ ಜಗತ್ತು ಒಟ್ಟಾಗಿ ನಿಲ್ಲಬೇಕು' ಎಂದು ಹೇಳಿದ್ದಾರೆ.

ಮತ್ತೊಂದು ಸ್ಫೋಟ:

ಕಾಬೂಲ್​ ಏರ್​ಪೋರ್ಟ್ ಬಳಿ ಸ್ಫೋಟವಾಗುತ್ತಿದ್ದಂತೆ, ಈ ಸ್ಥಳದಿಂದ ಸ್ವಲ್ಪ ದೂರದಲ್ಲಿರುವ ಬರೋನ್ ಹೋಟೆಲ್​ ಬಳಿ ಮತ್ತೊಂದು ಸ್ಫೋಟ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಸ್ಲಾಮಿಕ್ ಸ್ಟೇಟ್-ಖೋರಾಸನ್ ಎಂದು ಕರೆಯಲ್ಪಡುವ ಇಸ್ಲಾಮಿಕ್ ಸ್ಟೇಟ್ಸ್​ ಅಫ್ಘಾನ್​ನ ಅಂಗಸಂಸ್ಥೆ ಈ ಕುಕೃತ್ಯ ಎಸಗಿದೆ ಎನ್ನಲಾಗುತ್ತಿದೆ.

ಅಫ್ಘಾನಿಸ್ತಾನದಿಂದ ಜನರನ್ನು ಸ್ಥಳಾಂತರಿಸುವ ನಡುವೆ ಈ ದಾಳಿ ನಡೆದಿದ್ದು, ಅಲ್ಲಿನ ಪರಿಸ್ಥಿತಿಯ ಸ್ಪಷ್ಟ ಚಿತ್ರಣ ನೀಡುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.