ಟೋಕಿಯೋ (ಜಪಾನ್): ಅಪಹಾಸ್ಯ ಹಾಗೂ ಟೀಕೆಯ ಕಾರಣದಿಂದಾಗಿ ಜಪಾನ್ ಸರ್ಕಾರವು ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ನಿಲ್ಲಿಸಿದೆ.
ಜಪಾನ್ ಪ್ರಧಾನಿ ಶಿಂಜೊ ಅಬೆ ಪ್ರಾರಂಭಿಸಿದ ಉಚಿತ ಮಾಸ್ಕ್ ವಿತರಣಾ ಕಾರ್ಯವನ್ನು ಪ್ರಶ್ನಿಸಲು ಆರಂಭಿಸಿದ ಜನ, "ಅಬೆನೊಮಾಸ್ಕ್" ಎಂದು ಗೇಲಿ ಮಾಡಲು ಪ್ರಾರಂಭಿಸಿದ್ದರು.
ಒಬ್ಬರಿಗೆ ಒಂದು ಮಾಸ್ಕ್ ಕೊಡುವ ಬದಲು, ಒಂದು ಮನೆಗೆ 2 ಮಾಸ್ಕ್ ಕೊಡುವ ಕ್ರಮವನ್ನು ಕೆಲವರು ಪ್ರಶ್ನಿಸಿದರೆ, ಇನ್ನೂ ಕೆಲವರು ಮಾಸ್ಕ್ನ ಗುಣಮಟ್ಟ ಹಾಗೂ ಪರಿಣಾಮವನ್ನು ಅನುಮಾನಿಸಿದರು.
ಮಾಸ್ಕ್ಗಳು ಬಟ್ಟೆಯಿಂದ ಮಾಡಲ್ಪಟ್ಟಿದ್ದು, ಮೂಗು ಅಥವಾ ಮುಖದ ಕೆಳಭಾಗವನ್ನು ಸಂಪೂರ್ಣವಾಗಿ ಮುಚ್ಚುವುದಿಲ್ಲ ಎಂದು ಜನರು ಆರೋಪಿಸಿದರು. ಶಿಂಜೊ ಅಬೆ ಸ್ವತಃ ಮಾಸ್ಕ್ ಧರಿಸಿ ಕಾಣಿಸಿಕೊಂಡರೂ, ಅದರ ಕುರಿತು ಹಲವು ಜೋಕ್ ಹಾಗೂ ಮೀಮ್ಗಳು ಸೃಷ್ಟಿಯಾದವು. ಹೀಗಾಗಿ ಜಪಾನ್ ಸರ್ಕಾರವು ಮಾಸ್ಕ್ ವಿತರಣಾ ಕಾರ್ಯವನ್ನು ನಿಲ್ಲಿಸಿದೆ.