ETV Bharat / international

ಕಾಬೂಲ್​ ಬ್ಲಾಸ್ಟ್: ಅಮೆರಿಕ ಸೈನಿಕರು ಸೇರಿ 90 ಜನರು ಸಾವು; ದಾಳಿಯ ಹೊಣೆ ಹೊತ್ತ ISIS-K

ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಸಂಭವಿಸಿದ ದಾಳಿಯಲ್ಲಿ ಅಮೆರಿಕದ 13 ಸೇನಾ ಸಿಬ್ಬಂದಿ ಸೇರಿ ಕನಿಷ್ಠ 90 ಜನ ಮೃತಪಟ್ಟಿದ್ದಾರೆ ಎಂದು ಅಫ್ಘನ್ ಮತ್ತು ಅಮೆರಿಕ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

author img

By

Published : Aug 27, 2021, 2:09 AM IST

Updated : Aug 27, 2021, 1:02 PM IST

kabul
kabul

ಕಾಬೂಲ್: ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಗುರುವಾರ ಸಂಭವಿಸಿದ ಅವಳಿ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭೀಕರ ದಾಳಿ ಮಾಡಿದ್ದು ತಾವೇ ಎಂದು ಉಗ್ರ ಸಂಘಟನೆ ಐಸಿಸ್-ಕೆ ಒಪ್ಪಿಕೊಂಡಿದೆ. ಉಗ್ರ ಸಂಘಟನೆಯ ಕೃತ್ಯವನ್ನು ಭಾರತ, ಬ್ರಿಟನ್ ಸೇರಿ ವಿಶ್ವದ ಹಲವು ರಾಷ್ಟ್ರಗಳು ಖಂಡಿಸಿವೆ.

ಕಾಬೂಲ್‌ ಆತ್ಮಾಹುತಿ ದಾಳಿಯನ್ನು ಅಮೆರಿಕ ಖಚಿತಪಡಿಸಿದೆ. ದಾಳಿಯಲ್ಲಿ ಯುಎಸ್​ನ 13 ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ದಾಳಿಯ ಬಳಿಕವೂ ನಾವು ರಕ್ಷಣಾ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಅಮೆರಿಕಾದ ಕಮಾಂಡರ್ ಸ್ಪಷ್ಟಪಡಿಸಿದ್ದಾರೆ. ದಾಳಿಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ದಾಳಿಯ ಬಗ್ಗೆ ಹಲವು ದೇಶಗಳು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ.

ಭಾರತೀಯ ವಿದೇಶಾಂಗ ಇಲಾಖೆ ಖಂಡನೆ

ಕಾಬೂಲ್ ದಾಳಿಯನ್ನು ಭಾರತ ಕಟುವಾಗಿ ಖಂಡಿಸುತ್ತೆ. ಉಗ್ರ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವನ ಹೇಳುತ್ತೇವೆ. ಉಗ್ರರಿಗೆ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡುವವರ ವಿರುದ್ಧ ವಿಶ್ವ ಒಂದಾಗಿ ನಿಲ್ಲಬೇಕಾಗಿದೆ ಎಂಬುದನ್ನು ಇಂದಿನ ದಾಳಿ ಮತ್ತೊಮ್ಮೆ ತೋರಿಸಿಕೊಟ್ಟಿದೆ ಎಂದು ಭಾರತ ವಿದೇಶಾಂಗ ಇಲಾಖೆ ಅಭಿಪ್ರಾಯಪಟ್ಟಿದೆ.

ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟೋನಿಯೋ, ಕಾಬೂಲ್ ದಾಳಿ ಖಂಡಿಸಿದ್ದಾರೆ. ಇದು ಅಫ್ಘಾನಿಸ್ತಾನದ ಸ್ಥಿತಿಯನ್ನ ತೋರಿಸುತ್ತದೆ ಎಂದು ಹೇಳಿದ್ದಾರೆ.

Last Updated : Aug 27, 2021, 1:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.