ಇಸ್ಲಾಮಾಬಾದ್: ಕೊರೊನಾ ಸೋಂಕಿತ ಸಹೋದ್ಯೋಗಿ, ತಮ್ಮನ್ನು ಚುಂಬಿಸಿದ್ದಾನೆ ಎಂದು ಕರಾಚಿ ಮೆಟ್ರೋಪಾಲಿಟನ್ ಕಾರ್ಪೊರೇಷನ್ನ ಹಿರಿಯ ಅಧಿಕಾರಿಯೊಬ್ಬರು ದೂರಿದ್ದಾರೆ. ಕೊರೊನಾ ಪಾಸಿಟಿವ್ ಇದೆ ಎಂದು ಬಹಿರಂಗ ಪಡಿಸುವ ಮೊದಲು ಉದ್ದೇಶಪೂರ್ವಕವಾಗಿ ಮುತ್ತು ಕೊಟ್ಟಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ಇನ್ನು ಕಳೆದ ಎರಡು ತಿಂಗಳಿನಿಂದ ಸಹೋದ್ಯೋಗಿಗೆ ಸಂಬಳ ನೀಡಿಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಭ್ರಷ್ಟಾಚಾರದ ಆರೋಪ ಸಾಬೀತಾದ ನಂತರ ಆತನನ್ನು ಅಮಾನತುಗೊಳಿಸಲಾಗಿದೆ ಎಂದು ದೂರಿನಲ್ಲಿ ಅಧಿಕಾರಿ ತಿಳಿಸಿದ್ದಾರೆ.