ಇಸ್ಲಾಮಾಬಾದ್: ಕಾಶ್ಮೀರವು ಪಾಕಿಸ್ತಾನದ ವಿದೇಶಾಂಗ ನೀತಿಯ ಪ್ರಮುಖ ಭಾಗವಾಗಿ ಮುಂದುವರಿಯಲಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ತಿಳಿಸಿದ್ದಾರೆ.
ಫೆಬ್ರವರಿ 5 ರಂದು ಮುಜಫ್ಫರಾಬಾದ್‌ನಲ್ಲಿ ನಡೆದ ಪಿಒಕೆ(ಪಾಕ್ ಆಕ್ರಮಿತ ಕಾಶ್ಮೀರ) ವಿಧಾನಸಭೆಯಲ್ಲಿ ಪ್ರಧಾನಿ ಇಮ್ರಾನ್ ಖಾನ್ ಮಾಡಿದ ಭಾಷಣಕ್ಕೆ ಅನುಸಾರವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಖುರೇಶಿ, ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಕಾಶ್ಮೀರ ವಿವಾದಕ್ಕೆ ಶಾಶ್ವತ ಪರಿಹಾರ ಅಗತ್ಯ ಎಂದಿದ್ದಾರೆ.