ETV Bharat / international

ಕುಲಭೂಷಣ್ ಜಾಧವ್​ಗೆ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿದ ಪಾಕಿಸ್ತಾನ - ಪಾಕ್​ ವಿಧಾನಸಭೆಯಲ್ಲಿ ಮಸೂದೆ

ಕುಲಭೂಷಣ್‌ ಜಾಧವ್‌ ಸಂಬಂಧ ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಂಡಿಸಲಾಗಿರುವ ಮಸೂದೆಯಲ್ಲಿ ಇರುವ ನ್ಯೂನತೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಭಾರತ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಮೇಲ್ಮನವಿ ಸಲ್ಲಿಕೆ ಮಾಡಲು ಅಲ್ಲಿನ ಸಂಸತ್ತು ಒಪ್ಪಿಗೆ ನೀಡಿದೆ.

Kulbhushan Jadhav
Kulbhushan Jadhav
author img

By

Published : Nov 17, 2021, 7:59 PM IST

ಇಸ್ಲಾಮಾಬಾದ್​​(ಪಾಕಿಸ್ತಾನ): ಪಾಕಿಸ್ತಾನದ ಸೇನಾ ಕೋರ್ಟ್‌ನಿಂದ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕುಲಭೂಷಣ್‌ ಜಾಧವ್‌ (Kulbhushan Jadhav) ಪ್ರಕರಣದಲ್ಲಿ ಮೇಲ್ಮನವಿ ಸಲ್ಲಿಕೆ ಮಾಡಲು ಅಲ್ಲಿನ ಸಂಸತ್ತು ಒಪ್ಪಿಗೆ ನೀಡಿದೆ.

ಕಳೆದ ಜೂನ್​​​ ತಿಂಗಳಲ್ಲೇ ಪಾಕ್​ ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರಗೊಂಡಿದ್ದು, ಇದೀಗ ಪಾಕಿಸ್ತಾನ ಸಂಸತ್ತಿನ ಜಂಟಿ (Pakistan Parliament) ಅಧಿವೇಶನದಲ್ಲಿ ಈ ಮಸೂದೆಗೆ ಅನುಮೋದನೆ ನೀಡಲಾಗಿದೆ.

ತಮಗೆ ವಿಧಿಸಿರುವ ಗಲ್ಲು ಶಿಕ್ಷೆಯ ವಿರುದ್ಧವಾಗಿ ಮೇಲ್ಮನವಿ ಸಲ್ಲಿಕೆ ಮಾಡಲು ಕುಲಭೂಷಣ್​ ಜಾಧವ್​​ ಹಕ್ಕು ಹೊಂದಿದ್ದಾರೆಂದು ಈಗಾಗಲೇ ಅಂತಾರಾಷ್ಟ್ರೀಯ ನ್ಯಾಯಾಲಯ ತೀರ್ಪು ನೀಡಿದ್ದು, ಇದರ ಬೆನ್ನಲ್ಲೇ ಮೇಲ್ಮನವಿ ಸಲ್ಲಿಕೆ ಮಾಡುವ ಹಕ್ಕು ನೀಡುವ ಮಸೂದೆಗೆ ಪಾಕ್ ಸಂಸತ್ತು​ ಅಂಗೀಕಾರ ನೀಡಿದೆ.

ಗೂಢಚರ್ಯೆ ಮತ್ತು ಭಯೋತ್ಪಾದನೆ ಆರೋಪದ ಮೇಲೆ ಭಾರತೀಯ ನೌಕಾಪಡೆಯ ನಿವೃತ್ತ ಅಧಿಕಾರಿ ಜಾಧವ್ ಅವರಿಗೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ (Pakistani military court) ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಇದನ್ನು ಪ್ರಶ್ನೆ ಮಾಡಿದ್ದ ಭಾರತ, ಕುಲಭೂಷಣ್‌ ಅವರಿಗೆ ವಿಧಿಸಿರುವ ಗಲ್ಲು ಶಿಕ್ಷೆಯ ಬಗ್ಗೆ ಮೇಲ್ಮನವಿ ಸಲ್ಲಿಸುವ ಹಕ್ಕು ಇದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಈ ಹಿಂದೆ ಹೇಳಿದ್ದರು. ಅಂತಾರಾಷ್ಟ್ರೀಯ ಕೋರ್ಟ್‌ (International Court of Justice)ನಲ್ಲೂ ಜಾದವ್‌ ಪರವಾಗಿಯೇ ತೀರ್ಪು ಬಂದಿತ್ತು.

ಇದನ್ನೂ ಓದಿ: Syringe in Beer bottle: ಬಿಯರ್​ ಬಾಟಲಿಯಲ್ಲಿ ಸಿರಿಂಜ್, ಹೌಹಾರಿದ ವ್ಯಕ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.