ಅಫ್ಘಾನಿಸ್ತಾನ: ಅಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಮತ್ತು ವಿಶ್ವದ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್‌ಜೈ ಆತಂಕ ವ್ಯಕ್ತಪಡಿಸಿದ್ದಾರೆ.
-
We watch in complete shock as Taliban takes control of Afghanistan. I am deeply worried about women, minorities and human rights advocates. Global, regional and local powers must call for an immediate ceasefire, provide urgent humanitarian aid and protect refugees and civilians.
— Malala (@Malala) August 15, 2021 " class="align-text-top noRightClick twitterSection" data="
">We watch in complete shock as Taliban takes control of Afghanistan. I am deeply worried about women, minorities and human rights advocates. Global, regional and local powers must call for an immediate ceasefire, provide urgent humanitarian aid and protect refugees and civilians.
— Malala (@Malala) August 15, 2021We watch in complete shock as Taliban takes control of Afghanistan. I am deeply worried about women, minorities and human rights advocates. Global, regional and local powers must call for an immediate ceasefire, provide urgent humanitarian aid and protect refugees and civilians.
— Malala (@Malala) August 15, 2021
"ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸುವುದು ಆಘಾತಕಾರಿ ಸಂಗತಿ. ಅಲ್ಲಿನ ಜನರು ಮುಖ್ಯವಾಗಿ ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಮಾನವ ಹಕ್ಕುಗಳ ಪರ ಹೋರಾಡುವವರ ಸ್ಥಿತಿ ಬಗ್ಗೆ ನಾನು ಚಿಂತಿಸುತ್ತಿದ್ದೇನೆ" ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ: ಅಫ್ಘನ್ ರಾಜಧಾನಿ ಕಾಬೂಲ್ ತಾಲಿಬಾನ್ ಕೈವಶ: ವಿಮಾನ ನಿಲ್ದಾಣದಲ್ಲಿ ಗುಂಡಿನ ಮೊರೆತ
"ಜಾಗತಿಕ, ಪ್ರಾದೇಶಿಕ ಮತ್ತು ಸ್ಥಳೀಯ ಶಕ್ತಿಗಳು ಯುದ್ಧಪೀಡಿತ ದೇಶದಲ್ಲಿ ತಕ್ಷಣವೇ ಕದನ ವಿರಾಮಕ್ಕೆ ಕರೆ ನೀಡಬೇಕು. ತುರ್ತು ಮಾನವೀಯ ನೆರವು ನೀಡಬೇಕು. ಜೊತೆಗೆ ಅಲ್ಲಿನ ನಿರಾಶ್ರಿತರು ಮತ್ತು ನಾಗರಿಕರನ್ನು ರಕ್ಷಿಸಬೇಕು" ಎಂದು ಮಲಾಲ ಮನವಿ ಮಾಡಿದ್ದಾರೆ.