ಯೆಮನ್/ಸನಾ : ತೈಲ ಸಂಪದ್ಭರಿತವಾದ ಮಾರಿಬ್ ಪ್ರಾಂತ್ಯದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಹೌತಿ ಬಂಡುಕೋರರು ಎರಡು ಬಾರಿ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ್ದಾರೆ.
ಜನನಿಬಿಡ ನಗರವಾದ ಮಾರಿಬ್ನಲ್ಲಿ ಹೌತಿ ಬಂಡುಕೋರರು ಎರಡು ಬಾರಿ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿದ್ದು, ಈ ಬೃಹತ್ ಸ್ಫೋಟದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಯೊಬ್ಬರು ಕ್ಸಿನ್ಹುವಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಸೌದಿ ಬೆಂಬಲಿತ ಯೆಮನ್ ಸೇನೆಯ ಮೇಲೆ ಹೌತಿ ಬಂಡುಕೋರರು ದಾಳಿ ಮುಂದುವರೆಸಿದ್ದಾರೆ. ಇಂದು ನಡೆದ ಕ್ಷಿಪಣಿ ದಾಳಿಯಿಂದ ಸುಮಾರು 30 ಸೈನಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ವೈದ್ಯಕೀಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾರಿಬ್‌ನ ಸಾರ್ವಜನಿಕ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಇನ್ನು ಕಳೆದ ಒಂದು ವಾರದಿಂದ ಈಶಾನ್ಯ ಪ್ರಾಂತ್ಯದಲ್ಲಿ ಸರ್ಕಾರಿ ಪಡೆಗಳು ಕಾರ್ಯ ನಿರ್ವಹಿಸುತ್ತಿರುವ ಮಿಲಿಟರಿ ಪ್ರದೇಶಗಳ ಮೇಲೆ ಹೌತಿ ಬಂಡುಕೋರರು ತಮ್ಮ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದರು. ದಾಳಿಯಲ್ಲಿ ಒಟ್ಟು 20 ಕ್ಕೂ ಹೆಚ್ಚು ಸರ್ಕಾರಿ ಸೈನಿಕರು ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡಿದ್ದರು.
ಇದನ್ನೂ ಓದಿ: ಹೌತಿ ಬಂಡುಕೋರರ ದಾಳಿ : 20 ಮಂದಿ ಯೆಮನ್ ಸೈನಿಕರು ಸಾವು