ಜಕಾರ್ತಾ: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ನಾಪತ್ತೆಯಾದವರ ಸಂಖ್ಯೆ 27ಕ್ಕೆ ಏರಿಕೆಯಾಗಿದ್ದು, 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸುಮೇದಾಂಗ್ ಜಿಲ್ಲೆಯಲ್ಲಿ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಸಿಹಾಂಜುವಾನ್ ಗ್ರಾಮದಲ್ಲಿ ಭೂಕುಸಿತ ಉಂಟಾಗಿತ್ತು. ಬೆಟ್ಟದ ಇಳಿಜಾರಿನಲ್ಲಿರುವ 18 ಮನೆಗಳು ಹಾನಿಯಾಗಿದ್ದು, ಅನೇಕರು ಗಾಯಗೊಂಡಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಏಜೆನ್ಸಿಯ ತುರ್ತು ಘಟಕದ ಮುಖ್ಯಸ್ಥ ಬುಡಿ ಬುಡಿಮನ್ ಹೇಳಿದ್ದಾರೆ.
ಇದನ್ನೂ ಓದಿ: ಜಕಾರ್ತಾ ವಿಮಾನ ಪತನ: ಮಾನವ ಅವಶೇಷಗಳು ಪತ್ತೆ..!
ಪ್ರತಿಕೂಲ ವಾತಾವರಣದಲ್ಲಿಯೂ ಕಾಣೆಯಾದವರಿಗಾಗಿ ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈಗಾಗಲೇ ಮೃತಪಟ್ಟಿರುವ 13 ಜನರಲ್ಲಿ ಆರು ವರ್ಷದ ಬಾಲಕ ಹಾಗೂ ರಕ್ಷಣಾ ಸಿಬ್ಬಂದಿ ಕೂಡ ಇದ್ದಾರೆ ಎಂದು ಅವರು ಹೇಳಿದ್ದಾರೆ.