ಬೌಲ್ಡರ್ (ಕೊಲೊರಾಡೋ): ಕೊಲೊರಾಡೋ ಸೂಪರ್ ಮಾರ್ಕೆಟ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಅಧಿಕಾರಿ ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಶಂಕಿತ ವ್ಯಕ್ತಿಯೊಬ್ಬನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಂಕಿತ ಆರೋಪಿ ಸಹ ಘಟನೆಯಲ್ಲಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗುಂಡಿನ ದಾಳಯಲ್ಲಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ಕುರಿತು ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿ ಹೇಳಿದರು.
ಬೌಲ್ಡರ್ ಪೊಲೀಸ್ ಮುಖ್ಯಸ್ಥ ಮಾರಿಸ್ ಹೆರಾಲ್ಡ್ ಸೋಮವಾರ ರಾತ್ರಿ ಸುದ್ದಿಗೋಷ್ಠಿಯಲ್ಲಿ, ಪೊಲೀಸ್ ಅಧಿಕಾರಿ ಸೇರಿದಂತೆ 10 ಜನರು ಸಾವನ್ನಪ್ಪಿದ್ದಾರೆ. ಶಂಕಿತತ ಆರೋಪಿಯನ್ನು ಬಂಧಿಸಿದ್ದೇವೆ. ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.