ಇಸ್ಲಾಮಾಬಾದ್: ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ನಿತ್ಯ ಲಕ್ಷಾಂತರ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಇದರ ಮಧ್ಯೆ ಸಾವಿರಾರು ಜನರು ಡೆಡ್ಲಿ ವೈರಸ್ಗೆ ಬಲಿಯಾಗುತ್ತಿದ್ದಾರೆ. ಎರಡನೇ ಅಲೆ ಜೋರಾಗಿ ಬೀಸಲು ಶುರು ಮಾಡಿರುವ ಕಾರಣ ದೇಶದ ಬಹುತೇಕ ರಾಜ್ಯಗಳಲ್ಲಿ ಆಕ್ಸಿಜನ್, ಬೆಡ್ ಹಾಗೂ ಔಷಧ ಕೊರತೆ ಉಂಟಾಗಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಕೋವಿಡ್ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದಿದ್ದಾರೆ.
-
I want to express our solidarity with the people of India as they battle a dangerous wave of COVID-19. Our prayers for a speedy recovery go to all those suffering from the pandemic in our neighbourhood & the world. We must fight this global challenge confronting humanity together
— Imran Khan (@ImranKhanPTI) April 24, 2021 " class="align-text-top noRightClick twitterSection" data="
">I want to express our solidarity with the people of India as they battle a dangerous wave of COVID-19. Our prayers for a speedy recovery go to all those suffering from the pandemic in our neighbourhood & the world. We must fight this global challenge confronting humanity together
— Imran Khan (@ImranKhanPTI) April 24, 2021I want to express our solidarity with the people of India as they battle a dangerous wave of COVID-19. Our prayers for a speedy recovery go to all those suffering from the pandemic in our neighbourhood & the world. We must fight this global challenge confronting humanity together
— Imran Khan (@ImranKhanPTI) April 24, 2021
ಇಮ್ರಾನ್ ಖಾನ್ ಟ್ವೀಟ್ ಇಂತಿದೆ
ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿರುವ ಭಾರತದೊಂದಿಗೆ ನಮ್ಮ ಒಗ್ಗಟ್ಟು ವ್ಯಕ್ತಪಡಿಸಲು ನಾನು ಭಯಸುತ್ತೇನೆ. ನಮ್ಮ ನೆರೆಯ ದೇಶ ಮತ್ತು ಇಡೀ ಜಗತ್ತಿನಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಬಳಲುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಂದಾಗಿ ಹೋರಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಪಾಕಿಸ್ತಾನಲ್ಲಿ #IndiaNeedsOxygen, #PakistanStandsWithIndia, #IndiaFightsCovid ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ನಲ್ಲಿವೆ. ಕಳೆದ ಕೆಲ ದಿನಗಳ ಹಿಂದೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಅವರ ಪತ್ನಿಗೂ ಕೊರೊನಾ ಸೋಂಕು ತಗುಲಿರುವುದು ದೃಢಗೊಂಡಿತ್ತು.
ಕಳೆದ ಕೆಲ ದಿನಗಳ ಹಿಂದೆ ಚೀನಾ ಸಹ ಕೊರೊನಾ ನಿಯಂತ್ರಣ ವಿಷಯದಲ್ಲಿ ಭಾರತಕ್ಕೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ ಎಂದು ಹೇಳಿಕೊಂಡಿತ್ತು.
ಇದನ್ನೂ ಓದಿ: ಕೋವಿಡ್ ಸಂಕಷ್ಟದಲ್ಲಿ ಭಾರತ : ಸಹಾಯಕ್ಕೆ ಸಿದ್ಧರೆಂದ ಯುಎಸ್, ಬ್ರಿಟನ್ ಸರ್ಕಾರ
ಭಾರತದಲ್ಲಿ ಇದೀಗ ಪ್ರತಿದಿನ ಲಕ್ಷಾಂತರ ಕೋವಿಡ್ ಕೇಸ್ ದಾಖಲಾಗುತ್ತಿದ್ದು, ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ. ಪ್ರಮುಖವಾಗಿ ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ನವದೆಹಲಿ, ಪಂಜಾಬ್, ಕೇರಳದಲ್ಲಿ ಸೋಂಕಿತ ಪ್ರಕರಣ ಹೆಚ್ಚಾಗಿ ಕಂಡು ಬರುತ್ತಿವೆ.