ಸಿಯೋಲ್ (ದಕ್ಷಿಣ ಕೊರಿಯಾ): ಕೋವಿಡ್-19 ಸೋಂಕಿಗೆ ಒಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಉತ್ತರ ಕೊರಿಯಾದ ನಾಯಕ ಕಿಮ್ ಜೊಂಗ್ ಉನ್ ಸಹಾನುಭೂತಿಯ ಸಂದೇಶ ಕಳುಹಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
"ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಕಿಮ್ ಪ್ರಾಮಾಣಿಕವಾಗಿ ಆಶಿಸಿದ್ದಾರೆ" ಎಂದು ಕೊರಿಯಾದ ಕೇಂದ್ರ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನಾನು ಮತ್ತು ಪತ್ನಿ ಕೊರೊನಾ ವೈರಸ್ಗೆ ತುತ್ತಾಗಿದ್ದೇವೆ ಎಂದು ಟ್ರಂಪ್ ಶುಕ್ರವಾರ ಹೇಳಿದ್ದು, ವಿಶ್ವದಾದ್ಯಂತದ ನಾಯಕರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.