ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್‌ನಲ್ಲಿ ಮಿಡತೆಗಳನ್ನು ಸಂಪೂರ್ಣವಾಗಿ ಅಳಿಸಿ ಹಾಕಿದ ನಂತರ ಪಂಜಾಬ್ ಪ್ರಾಂತ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಗಳನ್ನು ನಾಶಪಡಿಸುತ್ತಿರುವ ಮಿಡತೆಗಳ ಹಾವಳಿ ತಡೆಗೆ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದೆ.
ಶುಕ್ರವಾರ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕರೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪಾಕಿಸ್ತಾನದ ನಾಲ್ಕು ಪ್ರಾಂತ್ಯದ ಮಂತ್ರಿಗಳು ಮತ್ತು ದೇಶದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ಮಿಡತೆಯ ಬಿಕ್ಕಟ್ಟನ್ನು ನಿವಾರಿಸಲು 7.3 ಬಿಲಿಯನ್ ರೂ.ಗಳ ರಾಷ್ಟ್ರೀಯ ಕ್ರಿಯಾ ಯೋಜನೆ (ಎನ್‌ಎಪಿ)ಗೆ ಅನುಮೋದನೆ ನೀಡಲಾಗಿದೆ.
ದೇಶದಲ್ಲಿ ಮಿಡತೆ ಹರಡುವುದನ್ನು ತಡೆಗಟ್ಟಲು ಮತ್ತು ಬೆಳೆ ನಷ್ಟವನ್ನು ತಡೆಗಟ್ಟಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪಾಕಿಸ್ತಾನ ಪ್ರಧಾನಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.