ETV Bharat / international

ಅತ್ಯಾಚಾರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪಾಕ್​ ವಾಹಿನಿಗಳಿಗೆ ನಿರ್ಬಂಧ - PEMRA

PEMRA ಜನರಲ್ ಮ್ಯಾನೇಜರ್ ಮುಹಮ್ಮದ್ ತಾಹಿರ್ ಟಿವಿ ವಾಹಿನಿಗಳಿಗೆ ನಿರ್ದೇಶನ ನೀಡಿದ್ದು, ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ಆದೇಶದಂತೆ ಸಿಯಾಲ್‌ಕೋಟ್ ಮೋಟರ್​ವೇನಲ್ಲಿ ನಡೆದ ಪ್ರಕರಣದ ಸುದ್ದಿಯನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ ಎಂದು ವಾಹಿನಿಗಳಿಗೆ ನಿರ್ದೇಶಿಸಿದ್ದಾರೆ.

Pakistan
ಪಾಕಿಸ್ತಾನ
author img

By

Published : Oct 3, 2020, 5:59 PM IST

ಇಸ್ಲಮಾಬಾದ್ (ಪಾಕಿಸ್ತಾನ): ಪೊಲೀಸರ ಕೋರಿಕೆಯ ಮೇರೆಗೆ ಇಲ್ಲಿನ ವಿಚಾರಣಾ ನ್ಯಾಯಾಲಯವು ಆದೇಶ ಹೊರಡಿಸಿದ ಬಳಿಕ, ಕಳೆದ ತಿಂಗಳು ಪಂಜಾಬ್ ಪ್ರಾಂತ್ಯದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಕುರಿತ ಸುದ್ದಿಗಳನ್ನು ಪ್ರಸಾರ ಮಾಡದಂತೆ ಎಲ್ಲಾ ಟಿವಿ ಚಾನೆಲ್‌ಗಳಿಗೆ ನಿರ್ಬಂಧ ಹೇರಲಾಗಿದೆ.

ಈ ಕುರಿತು ನಿಷೇಧ ಆದೇಶ ಹೊರಡಿಸಿರುವ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರ (PEMRA), ಎಲ್ಲಾ ಉಪಗ್ರಹ ಟಿವಿ ಚಾನೆಲ್‌ಗಳು ಅತ್ಯಾಚಾರ ಕುರಿತ ಸುದ್ದಿಗಳನ್ನು ಪ್ರಸಾರ ಮಾಡದಂತೆ ಸೂಚನೆ ನೀಡಿದೆ. ಈ ಬಗ್ಗೆ ಪಾಕಿಸ್ತಾನ ವಿದ್ಯುನ್ಮಾನ ಮಾಧ್ಯಮ ನಿಯಂತ್ರಣ ಪ್ರಾಧಿಕಾರದ ಜನರಲ್ ಮ್ಯಾನೇಜರ್ ಮುಹಮ್ಮದ್ ತಾಹಿರ್ ನಿರ್ದೇಶನ ನೀಡಿದ್ದು, ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದ ಆದೇಶದಂತೆ ಸಿಯಾಲ್‌ಕೋಟ್ ಮೋಟರ್​ವೇನಲ್ಲಿ ನಡೆದ ಪ್ರಕರಣದ ಸುದ್ದಿಯನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ ಎಂದು ವಾಹಿನಿಗಳಿಗೆ ನಿರ್ದೇಶಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಜುಲ್ಫಿಕರ್ ಚೀಮಾ ಎಂಬವರು, ಘಟನೆಯ ಮಾಧ್ಯಮ ಪ್ರಸಾರವನ್ನು ನಿಷೇಧಿಸುವಂತೆ ಕೋರಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಘಟನೆ ಘೋರ ಅಪರಾಧ ಎಂದು ಹೇಳಿರುವ ಅವರು, ಪ್ರಕರಣದ ತ್ವರಿತ ತನಿಖೆ ವಿಚಾರವಾಗಿ ಮಾಧ್ಯಮಗಳಿಗೆ ನಿರ್ಬಂಧ ಹೇರಲು ಮನವಿ ಮಾಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.