ETV Bharat / international

ಗ್ರೆನೆಡ್​ನೊಂದಿಗೆ ಆಟವಾಡುತ್ತಿದ್ದ ವೇಳೆ ಸ್ಫೋಟ: ಪಾಕಿಸ್ತಾನದಲ್ಲಿ ಇಬ್ಬರು ಮಕ್ಕಳು ಸಾವು - ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಮಕ್ಕಳು ಸಾವು

ದಾರಿಯಲ್ಲಿ ಬಿದ್ದಿದ್ದ ಗ್ರೆನೆಡ್​​ಗಳನ್ನು ಮಕ್ಕಳು ಮನೆಗೆ ತೆಗೆದುಕೊಂಡು ಹೋಗಿ ಆಟವಾಡುತ್ತಿದ್ದ ವೇಳೆ ಸ್ಫೋಟಗೊಂಡು ಇಬ್ಬರು ಮಕ್ಕಳು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಪೇಶಾವರದಲ್ಲಿ ನಡೆದಿದೆ.

grenade
grenade
author img

By

Published : Jan 6, 2021, 8:05 PM IST

ಪೇಶಾವರ (ಪಾಕಿಸ್ತಾನ): ಗ್ರೆನೆಡ್​ಗಳೊಂದಿಗೆ ಆಟವಾಡುತ್ತಿದ್ದಾಗ ಸ್ಫೋಟಗೊಂಡು ಇಬ್ಬರು ಮಕ್ಕಳು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಪೇಶಾವರದಲ್ಲಿ ನಡೆದಿದೆ. ಗಾಯಗೊಂಡಿರುವ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳೀಯ ಪೊಲೀಸ್ ಅಧಿಕಾರಿ ರಿಯಾಜ್ ಅಹ್ಮದ್ ಪ್ರಕಾರ, ದಾರಿಯಲ್ಲಿ ಬಿದ್ದಿದ್ದ ಗ್ರೆನೆಡ್​​ಗಳನ್ನು ಮಕ್ಕಳು ಮನೆಗೆ ತೆಗೆದುಕೊಂಡು ಹೋಗಿ ಆಟವಾಡುತ್ತಿದ್ದರು. ಆ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದಿದ್ದಾರೆ.

ಸುಮಾರು ವರ್ಷಗಳಿಂದ ಈ ಪ್ರದೇಶದಲ್ಲಿ ಉಗ್ರರು ನೆಲೆಸಿದ್ದು, ದುಷ್ಕೃತ್ಯಗಳು ನಡೆಯುತ್ತಿರುತ್ತವೆ. ಹಾಗಾಗಿ ಈ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.