ದಕ್ಷಿಣ ವಜೀರಿಸ್ತಾನ್(ಪಾಕಿಸ್ತಾನ): ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಉಗ್ರ ಸಂಘಟನೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಏಳು ಯೋಧರು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ದಕ್ಷಿಣ ವಜೀರಿಸ್ತಾನದಲ್ಲಿ ನಡೆದ ಗುಂಡಿನ ಕಾಳಗದ ವೇಳೆ ಈ ಘಟನೆ ಸಂಭವಿಸಿದೆ.
ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿರುವ ಯೋಧರು ಐವರು ಉಗ್ರರನ್ನು ಹತ್ಯೆಗೈದಿದ್ದಾರೆ. ಸ್ಥಳದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಅಕ್ರಮ ಸಂಬಂಧ ಶಂಕೆ: ದೇವಸ್ಥಾನದ ಕೋಣೆಯಲ್ಲೇ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಅರ್ಚಕ
ಉಗ್ರರು ಅವಿತುಕುಳಿತಿದ್ದ ಖಚಿತ ಮಾಹಿತಿ ಆಧರಿಸಿ, ಪಾಕಿಸ್ತಾನ ಯೋಧರು ದಾಳಿ ನಡೆಸಿದ್ದರು. ಈ ವೇಳೆ ಉಗ್ರರ ಮತ್ತೊಂದು ಗುಂಪು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದೆ ಎನ್ನಲಾಗುತ್ತಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರ ಸಂಘಟನೆ ಅಧಿಕಾರಕ್ಕೆ ಬರುತ್ತಿದ್ದಂತೆ ಪಾಕಿಸ್ತಾನದ ಗಡಿ ಪ್ರದೇಶಗಳಲ್ಲಿ ತಾಲಿಬಾನ್ ಉಗ್ರರ ಉಪಟಳ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.