ಕಠ್ಮಂಡು: ಇದೇ ಮೊದಲ ಬಾರಿಗೆ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಅವರು ನೇಪಾಳಕ್ಕೆ ಭೇಟಿ ನೀಡಿದ್ದು, ಭಾರತ ಮತ್ತು ನೇಪಾಳವು "ಅತ್ಯಂತ ಬಲವಾದ" ಸಂಬಂಧವನ್ನು ಹೊಂದಿದೆ ಎಂದು ತಿಳಿಸಿದ್ದಾರೆ.
ಇಂದು ನೇಪಾಳಕ್ಕೆ ಆಗಮಿಸಿದ ನಂತರ ಮಾತನಾಡಿದ ಅವರು, ನೇಪಾಳ ಸರ್ಕಾರ ಮತ್ತು ವಿದೇಶಾಂಗ ಕಾರ್ಯದರ್ಶಿಗೆ ಆತ್ಮೀಯ ಆತಿಥ್ಯಕ್ಕಾಗಿ ಧನ್ಯವಾದ ಹೇಳಲು ಬಯಸುತ್ತೇನೆ. "ನಾನು ಮೊದಲೇ ಇಲ್ಲಿಗೆ ಬರಲು ಬಯಸಿದ್ದೆ. ಆದರೆ, ಕೋವಿಡ್-19 ಹಿನ್ನೆಲೆ ಸಾಧ್ಯವಾಗಲಿಲ್ಲ. ಇಲ್ಲಿಗೆ ಬಂದಿರುವುದು ನನಗೆ ತುಂಬಾ ಸಂತಸ ತಂದಿದೆ. ಭಾರತಕ್ಕೆ ಮತ್ತು ನೇಪಾಳಕ್ಕೆ ಬಲವಾದ ಸಂಬಂಧವಿದೆ. ನಾವು ಈ ಸಂಬಂಧವನ್ನು ಹೀಗೆ ಮುಂದುವರೆಸಿಕೊಂಡು ಹೋಗಲು ಪ್ರಯತ್ನಿಸುತ್ತೇವೆ" ಎಂದಿದ್ದಾರೆ.
ಇದನ್ನೂ ಓದಿ: ನೇಪಾಳ -ಭಾರತ ಸಂಬಂಧ ವೃದ್ಧಿ ಕಸರತ್ತು: ನ.26-27ಕ್ಕೆ ವಿದೇಶಾಂಗ ಕಾರ್ಯದರ್ಶಿ ಪ್ರವಾಸ
ಇತ್ತೀಚಿನ ವರ್ಷಗಳಲ್ಲಿ ದ್ವಿಪಕ್ಷೀಯ ಸಹಕಾರವು ಬಲಗೊಂಡಿದೆ. ನೇಪಾಳದೊಂದಿಗಿನ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಲು ಮತ್ತು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರದ ಬಗ್ಗೆ ಚರ್ಚೆ ನಡೆಸಲು ಹರ್ಷವರ್ಧನ್ ಶ್ರೀಂಗ್ಲಾ ಅವರು ಭೇಟಿ ನೀಡಿದ್ದಾರೆ.