ವೆಲ್ಲಿಂಗ್ಟನ್ (ನ್ಯೂಜಿಲ್ಯಾಂಡ್): ಆಕ್ಲೆಂಡ್‌ನಲ್ಲಿ ಇಬ್ಬರು ಅಧಿಕಾರಿಗಳನ್ನು ಗುಂಡಿಕ್ಕಿ ಗಂಭೀರವಾಗಿ ಗಾಯಗೊಳಿಸಲಾಗಿದ್ದು, ಶಂಕಿತ ಪರಾರಿಯಾಗಿದ್ದಾನೆ ಎಂದು ನ್ಯೂಜಿಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಅವರು ನಿತ್ಯ ಸಂಚಾರ ನಿಲುಗಡೆ ನಡೆಸುತ್ತಿದ್ದರು. ಆಗ ವ್ಯಕ್ತಿಯೊಬ್ಬ ಅವರಿಗೆ ಗುಂಡಿಕ್ಕಿ ಬಳಿಕ ಶಂಕಿತ ವಾಹನವು ಪ್ರತ್ಯಕ್ಷದರ್ಶಿಗೂ ಡಿಕ್ಕಿ ಹೊಡೆದಿದ್ದು, ಆತನೂ ಗಾಯಗೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಕರಣ ನಡೆದ ಪ್ರದೇಶದಲ್ಲಿ ಶಾಲೆಗಳಿಗೆ ಲಾಕ್‌ಡೌನ್‌ಗೆ ಹಾಕಲಾಗಿದ್ದು, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಜನರು ಆ ಪ್ರದೇಶದಿಂದ ದೂರವಿರಲು ಸಲಹೆ ನೀಡಲಾಗಿದೆ.