ETV Bharat / international

17 ವರ್ಷದ ಬಾಲಕಿ ಮೇಲೆ ಪಾಕ್​ನಲ್ಲಿ 4 ತಿಂಗಳು ನಿರಂತರ ರೇಪ್​

ಮಾತನಾಡಲು ಸಾಧ್ಯವಾಗದ ಬಾಲಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪಾಕ್​ನಲ್ಲಿ ನಡೆದಿದೆ.

Teenage girl rape in pak
Teenage girl rape in pak
author img

By

Published : Nov 1, 2020, 5:11 AM IST

ಇಸ್ಲಾಮಾಬಾದ್​: ಮಾತನಾಡಲು ಬಾರದ 17 ವರ್ಷದ ಬಾಲಕಿ ಮೇಲೆ ಪಾಕ್​ನಲ್ಲಿ ಕಳೆದ ನಾಲ್ಕು ತಿಂಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆ ನಡೆದಿದೆ.

ಪಾಕಿಸ್ತಾನದ ಬಾದಿನ್​​ನಲ್ಲಿ ಈ ದುರ್ಘಟನೆ ನಡೆದಿದ್ದು, ಸಂತ್ರಸ್ತೆ ಗರ್ಭಿಣಿಯಾದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಮಾತನಾಡಲು ಆಗದ ಕಾರಣ ಕಳೆದ 4 ತಿಂಗಳಿಂದ ದುಷ್ಕರ್ಮಿಗಳು ಆಕೆಯ ಮೇಲೆ ಕೃತ್ಯವೆಸಗಿದ್ದಾರೆ.

ಕುಟುಂಬ ಪಾಕಿಸ್ತಾನದ ಬಾದಿನ್​ ಹಳ್ಳಿಯಲ್ಲಿ ವಾಸವಾಗಿದ್ದು, ಅಲ್ಲಿನ ಕೆಲ ದುಷ್ಕರ್ಮಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕಿಗೆ ಮಾತನಾಡಲು ಸಾಧ್ಯವಾಗದ ಕಾರಣ ಇದರ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.

ಈಗಾಗಲೇ ಬಾಲಕಿಯನ್ನ ವೈದ್ಯಕೀಯ ಪರೀಕ್ಷೆಗೋಸ್ಕರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪೊಲೀಸರು ಶಂಕಿತರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.