ದುಬೈ: ಓಮನ್ ಕರಾವಳಿಯ ಅರೇಬಿಯನ್ ಸಮುದ್ರದಲ್ಲಿ ತೈಲ ಟ್ಯಾಂಕರ್ ಮೇಲೆ ಡ್ರೋನ್ ದಾಳಿ ನಡೆದಿದೆ ಎಂದು ತಮ್ಮ ನೌಕಾಪಡೆಯ ಸ್ಫೋಟಕ ತಜ್ಞರು ಹೇಳಿರುವುದಾಗಿ ಯುಎಸ್ ಸೇನೆ ತಿಳಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅದು ಮಾಹಿತಿ ನೀಡಿದೆ.
ಓಮನ್ ತೈಲ ಟ್ಯಾಂಕರ್ ಮರ್ಸರ್ ಸ್ಟ್ರೀಟ್‌ನಲ್ಲಿ ಮೇಲೆ ಕಳೆದ ಗುರುವಾರ ರಾತ್ರಿ ದಾಳಿ ನಡೆದಿದೆ. ಈ ಪ್ರದೇಶದಲ್ಲಿ ಇರಾನ್‌ನೊಂದಿಗೆ ಉಂಟಾದ ಉದ್ವಿಗ್ನತೆಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆದು ಹಲವು ವರ್ಷಗಳ ಬಳಿಕ ನಡೆದ ಮೊದಲ ದಾಳಿ ಇದಾಗಿದೆ ಎಂದು ಅಮೆರಿಕ ಸೇನೆ ತಿಳಿಸಿದೆ.
ಓದಿ : ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ-ಅಮೆರಿಕನ್ ರಶಾದ್ ಹುಸೇನ್ ನೇಮಕ
ಯಾವುದೇ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಆದರೂ, ಇರಾನ್ ಡ್ರೋನ್ ದಾಳಿ ನಡೆಸಿದೆ ಎಂದು ಇಸ್ರೇಲ್ ಆಧಿಕಾರಿಗಳು ಆರೋಪಿಸಿದ್ದಾರೆ. ಇರಾನ್ ದಾಳಿಯನ್ನು ನೇರವಾಗಿ ಒಪ್ಪಿಕೊಳ್ಳದಿದ್ದರೂ, ಪಶ್ಚಿಮ ಕರಾವಳಿಯಲ್ಲಿ ಕಠಿಣ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. ಯಾಕೆಂದರೆ, ಇರಾನ್ ಸೇನೆ ಅಲ್ಲಿನ ಸರ್ವೋಚ್ಚ ನಾಯಕ ಅಯಾತುಲ್ಲಾ ಅಲಿ ಖಮೇನಿಯ ಕೈಯಲ್ಲಿದೆ ಎಂದು ಅಮೆರಿಕ ಸೇನೆ ಹೇಳಿದೆ.