ETV Bharat / international

ಇಸ್ರೇಲ್​ನಲ್ಲಿ 16 ವರ್ಷದ ಬಾಲಕಿ ಮೇಲೆ 30 ಜನರಿಂದ ಅತ್ಯಾಚಾರ... ಸಾವಿರಾರು ಜನರಿಂದ ಪ್ರತಿಭಟನೆ!

ರೆಸಾರ್ಟ್​​ವೊಂದರಲ್ಲಿ 16 ವರ್ಷದ ಬಾಲಕಿ ಮೇಲೆ 30 ಜನರಿಂದ ಸಾಮೂಹಿಕ ಅತ್ಯಾಚಾರವೆಸಗಲಾಗಿರುವ ಸುದ್ದಿ ಬೆಳಕಿಗೆ ಬಂದಿದ್ದು, ಇದೀಗ ಇಸ್ರೇಲ್​ನಲ್ಲಿ ಪ್ರತಿಭಟನೆ ಭುಗಿಲೆದ್ದಿದೆ.

16 year old girl gang rape
16 year old girl gang rape
author img

By

Published : Aug 21, 2020, 10:44 PM IST

ಇಸ್ರೇಲ್​​: 16 ವರ್ಷದ ಬಾಲಕಿಯೋರ್ವಳ ಮೇಲೆ ರೆಡ್​​ ಸಿ ರೆಸಾರ್ಟ್​​​ನಲ್ಲಿ ಸುಮಾರು 30 ಮಂದಿ ಅತ್ಯಾಚಾರವೆಸಗಿದ್ದಾರೆ ಎಂಬ ಮಾಹಿತಿ ಹೊರಬರುತ್ತಿದ್ದಂತೆ ಸಾವಿರಾರು ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಸುದ್ದಿ ವಿವಿಧ ಸುದ್ದಿವಾಹಿನಿಗಳಲ್ಲಿ ಪ್ರಕಟಗೊಂಡಿದೆ, ಕೃತ್ಯ ಎಸಗಲು 20ಕ್ಕೂ ಹೆಚ್ಚು ಜನರು ಕ್ಯೂನಲ್ಲಿ ನಿಂತಿದ್ದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದ್ದು, ಇವರು ಬಾಲಕಿಯ ನಗ್ನ ವಿಡಿಯೋ ವೈರಲ್​ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಕಳೆದ ವಾರವೇ ದೂರು ದಾಖಲು ಮಾಡಿದ್ದಳು ಎನ್ನಲಾಗಿದ್ದು, ಆದರೆ ಪೊಲೀಸರು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎಂದು ತಿಳಿದು ಬಂದಿದೆ.

ಅತ್ಯಾಚಾರ ಪ್ರಕರಣದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿದೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಅಲ್ಲಿನ ಪ್ರಧಾನಿ ಬೆಂಜಮಿನ್​ ನೆತಾನ್ಯಹು, ಇದೊಂದು ಆಘಾತಕಾರಿ ಘಟನೆಯಾಗಿದೆ ಎಂದಿದ್ದಾರೆ. ಜತೆಗೆ ಎಲ್ಲ ಶಂಕಿತರ ಬಂಧನ ಮಾಡುವಂತೆ ಸೂಚನೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.