ಮಾಸ್ಕೋ: ರಷ್ಯಾದ ಮೀನುಗಾರಿಕಾ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ 17 ಜನ ಮೀನುಗಾರರು ನಾಪತ್ತೆಯಾಗಿದ್ದಾರೆ.
ಬ್ಯಾರೆಂಟ್ಸ್ ಸಮುದ್ರದಲ್ಲಿ ದೋಣಿ ಮುಳುಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ಸೋಮವಾರ ವರದಿ ಮಾಡಿವೆ.
19 ಜನರಿದ್ದ ಒನೆಗಾ ಎಂಬ ದೋಣಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿತ್ತು. ಭಾರಿ ಪ್ರಮಾಣದ ಮಂಜುಗಡ್ಡೆ ಪರಿಣಾಮ ಸಮುದ್ರದಲ್ಲಿ ಹಡಗು ಮುಳುಗಿದೆ ಎಂದು ರಷ್ಯಾದ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಮೀನುಗಾರಿಕೆಗೆ ತೆರಳಿದ್ದ ಪಾತಿ ದೋಣಿ ಮುಳುಗಡೆ: ಕರಾವಳಿ ಕಾವಲು ಪಡೆಯಿಂದ ರಕ್ಷಣೆ
ಹವಾಮಾನ ವೈಪರೀತ್ಯದ ನಡುವೆ ನಾಪತ್ತೆಯಾದ ಮೀನುಗಾರರಿಗಾಗಿ ಶೋಧ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ.