ಮೊಗಾಡಿಶು (ಸೊಮಾಲಿಯಾ): ರಾಜಧಾನಿ ಮೊಗಾಡಿಶು ಬಳಿ ಇಂದು ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ.
ದಾಳಿಯ ಹೊಣೆಯನ್ನು ಅಲ್-ಶಬಾಬ್ ಎಂಬ ಸೊಮಾಲಿ ಭಯೋತ್ಪಾದಕ ಸಂಘಟನೆ ವಹಿಸಿಕೊಂಡಿದ್ದು, ಕನಿಷ್ಠ ಮೂರು ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ಶನಿವಾರ ವರದಿ ಮಾಡಿವೆ.
ಟರ್ಕಿಶ್ ಎಂಜಿನಿಯರ್‌ಗಳನ್ನು ಗುರಿಯಾಗಿಸಿಕೊಂಡು ಈ ದಾಳಿಯನ್ನು ನಡೆಸಿದ್ದಾರೆ ಎಂದು ಸೊಮಾಲಿಯ ಸುದ್ದಿ ವಾಹಿನಿಗಳು ವರದಿ ಮಾಡಿವೆ. ಸ್ಫೋಟದಲ್ಲಿ ಟರ್ಕಿಯ ಓರ್ವ ಅಧಿಕಾರಿ ಮತ್ತು ಇಬ್ಬರು ಸೊಮಾಲಿ ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ.
ಸೊಮಾಲಿಯಾ 1990 ರ ದಶಕದ ಆರಂಭದಿಂದ ಆಂತರಿಕ ಹಿಂಸಾಚಾರದಲ್ಲಿ ಮುಳುಗಿದ್ದು ಅಲ್-ಖೈದಾ ಜೊತೆ ಗುಂಪುಳೊಂದಿಗೆ ಸಂಪರ್ಕ ಹೊಂದಿರುವ ಅಲ್-ಶಬಾಬ್‌ನಂತಹ ಭಯೋತ್ಪಾದಕ ಸಂಘಟನೆಯಿಂದ ಇಂತಹ ದಾಳಿಗಳು ನಡೆಯುತ್ತಲೇ ಇವೆ.