ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸೋಮವಾರ ನಡೆದ ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ. ಬಂದೂಕುಧಾರಿಗಳು ಮನಬಂದಂತೆ ಗುಂಡು ಹಾರಿಸಿದ್ದರಿಂದ ಮೂವರು ಮೃತಪಟ್ಟಿದ್ದಾರೆ.
ಪೂರ್ವ ಘಜ್ನಿ ಪ್ರಾಂತ್ಯದಲ್ಲಿನ ಪ್ರಾಂತೀಯ ಕಂದಾಯ ನಿರ್ದೇಶನಾಲಯದ ಮೇಲೆ ದಾಳಿ ಮಾಡಿದ ಬಂದೂಕುಧಾರಿಗಳು, ಇಬ್ಬರು ಕಾರ್ಮಿಕರ ಮೇಲೆ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಅಲ್ಲಿನ ಹಿರಿಯ ಪೊಲೀಸ್ ಅಧಕಾರಿಗಳು ತಿಳಿಸಿದ್ದಾರೆ.
ಕಾರ್ಮಿಕರು ಕಚೇರಿಯತ್ತ ತೆರಳುತ್ತಿದ್ದಾಗ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಬಂದೂಕುಧಾರಿಗಳು ಗುಂಡು ಹಾರಿಸಿ ಕೊಂದಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆ ಎನ್ನಲಾಗುತ್ತಿದೆ.
ಇದಕ್ಕೂ ಮುನ್ನ ರಾಷ್ಟ್ರ ರಾಜಧಾನಿ ಕಾಬೂಲ್‌ನಲ್ಲಿಯೂ ಬಾಂಬ್ ದಾಳಿ ನಡೆದಿದೆ. ಆದರೆ ಯಾವುದೇ ಗುಂಪು ಈವರೆಗೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.