ETV Bharat / international

ಆಫ್ಘನ್ ಪರಿಸ್ಥಿತಿಯನ್ನು ಪ್ರತ್ಯೇಕವಾಗಿ ನೋಡಲಾಗಲ್ಲ: ಪ್ರಧಾನಿ - ಪ್ರಧಾನಿ ಇಟಲಿ ಪ್ರವಾಸ

ಆಫ್ಘನ್​ನಿಂದ ಬರುವ ಬೆದರಿಕೆಯನ್ನು ಅಂತಾರಾಷ್ಟ್ರೀಯ ಸಮುದಾಯವು ಎಚ್ಚರಿಕೆಯಿಂದ ಗಮನಿಸಬೇಕು ಎಂದು ಇಟಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮೋದಿ
ಮೋದಿ
author img

By

Published : Oct 30, 2021, 7:40 AM IST

ರೋಮ್(ಇಟಲಿ): ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಯುದ್ಧ ಪೀಡಿತ ದೇಶದಿಂದ ಬರುವ ಯಾವುದೇ ರೀತಿಯ ಬೆದರಿಕೆ ವಿರುದ್ಧ ಅಂತಾರಾಷ್ಟ್ರೀಯ ಸಮುದಾಯವು ಬಹಳ ಎಚ್ಚರಿಕೆಯಿಂದ ಗಮನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಭೇಟಿ ನೀಡಿದ್ದಾರೆ. ಅವರು, ಇಟಲಿಯ ಮಾರಿಯೋ ದ್ರಾಘಿ ಜತೆ ಅಫ್ಘಾನಿಸ್ತಾನದ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿನ ಸಮಸ್ಯೆಗಳಿಗೆ ಮೂಲ ಕಾರಣ ಮೂಲಭೂತವಾದ, ಉಗ್ರವಾದ, ಭಯೋತ್ಪಾದನೆ.

ಇದರ ಪರಿಣಾಮಗಳನ್ನು ಬಹಳ ಎಚ್ಚರಿಕೆಯಿಂದ ಗಮನಿಸಬೇಕಿದೆ. ಉತ್ತಮ ಆಡಳಿತ ನೀಡುವಲ್ಲಿ ತಾಲಿಬಾನ್ ಸರ್ಕಾರ​ ವಿಫಲವಾಗಿದೆ. ಪರಿಸ್ಥಿತಿಯನ್ನು ಈಗಿರುವಂತೆ ನಿಭಾಯಿಸಲು ಸಾಧ್ಯವಾಗಲ್ಲ ಅನ್ನೋದು ಆತ್ಮಾವಲೋಕನದ ವಿಷಯವಾಗಬೇಕು ಎಂದು ಮೋದಿ ಹೇಳಿದ್ದಾರೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಇಟಲಿ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಉಭಯ ನಾಯಕರ ವ್ಯಾಪಕ ಮಾತುಕತೆ

ಅಫ್ಘಾನಿಸ್ತಾನದ ಜನರು ಬಿಕ್ಕಟ್ಟಿನಲ್ಲಿ ಸಿಲುಕಿದ್ದು, ಅವರಿಗೆ ವಿದೇಶಗಳ ನೆರವು ಬೇಕಿದೆ. ಈ ಸಂಬಂಧ ಜಿ-20 ಶೃಂಗಸಭೆಯಲ್ಲಿ ಚರ್ಚಿಸಲಾಗುವುದು ಎಂದು ಇಟಲಿ ಪ್ರಧಾನಿ ಹೇಳಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.