ಬೊಲಿವಿಯಾ: ಮಧ್ಯಂತರ ಅಧ್ಯಕ್ಷೆ ಜೀನೈನ್ ಅನೆಜ್ ಚಾವೇಜ್ಗೂ ಕೊರೊನಾ ಸೋಂಕು ತಗುಲಿರುವುದು ಕನ್ಫರ್ಮ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್ನಲ್ಲಿ ಖುದ್ದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೊರೊನಾ ಸೋಂಕು ತಗಲಿದ್ದು, ಆರೋಗ್ಯವಾಗಿದ್ದೇನೆ. ಐಸೋಲೇಷನ್ನಲ್ಲಿದ್ದು, ಕೆಲಸ ಮಾಡಲಿದ್ದೇನೆ ಎಂದು ಟ್ವೀಟ್ ಮಾಡಿರುವ 53 ವರ್ಷದ ಅಧ್ಯಕ್ಷೆ ಮುಂದಿನ 14 ದಿನಗಳ ಕಾಲ ಮನೆಯಲ್ಲೇ ಕ್ವಾರಂಟೈನ್ಗೊಳಗಾಗಲಿದ್ದಾರೆ.
-
He dado positivo a Covid19, estoy bien, trabajaré desde mi aislamiento. Juntos, vamos a salir adelante. pic.twitter.com/oA4YVYlZFa
— Jeanine Añez Chavez (@JeanineAnez) July 9, 2020 " class="align-text-top noRightClick twitterSection" data="
">He dado positivo a Covid19, estoy bien, trabajaré desde mi aislamiento. Juntos, vamos a salir adelante. pic.twitter.com/oA4YVYlZFa
— Jeanine Añez Chavez (@JeanineAnez) July 9, 2020He dado positivo a Covid19, estoy bien, trabajaré desde mi aislamiento. Juntos, vamos a salir adelante. pic.twitter.com/oA4YVYlZFa
— Jeanine Añez Chavez (@JeanineAnez) July 9, 2020
ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರನ್ನ ತಪಾಸಣೆ ಮಾಡಿದಾಗ ಕೋವಿಡ್-19 ಇರುವುದು ಖಚಿತಗೊಂಡಿದೆ. ಬೊವಿಲಿಯಾದಲ್ಲಿ ಕೊರೊನಾ ಲಾಕ್ಡೌನ್ ಜಾರಿಯಲ್ಲಿರುವ ಕಾರಣ ಮೇ ತಿಂಗಳಲ್ಲಿ ನಡೆಯಬೇಕಾಗಿರುವ ಚುನಾವಣೆ ಮುಂದೂಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಜೀನೈನ್ ಅನೆಜ್ ಹಂಗಾಮಿ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಕ್ಕಟ್ಟಿನ ಸಮಯದಲ್ಲಿ ಅನೆಜ್ ತೆಗೆದುಕೊಳ್ಳುತ್ತಿರುವ ನಿರ್ಧಾರಗಳ ಕುರಿತು ದೇಶದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿವೆ.