ಬ್ರಿಟನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಆರೋಗ್ಯ ಸ್ಥಿತಿ ವಿಷಮ ಪರಿಸ್ಥಿತಿ ತಲುಪಿದ್ದು, ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ.
ವೈದ್ಯರ ಸಲಹೆ ಮೇರೆಗೆ ಅವರನ್ನು ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್ ಮೂಲಕ ಆಮ್ಲಜನಕ ಒದಗಿಸಲಾಗುತ್ತಿದೆ.
ಪ್ರಧಾನಿಯೇ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿನ್ನೆಲೆ, ಸರ್ಕಾರಿ ವ್ಯವಹಾರಗಳು ಎಂದಿನಂತೆ ಮುಂದುವರಿಯಲಿವೆ ಎಂದು ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಹೇಳಿದ್ದಾರೆ.
ಲಂಡನ್‌ನ ಸೇಂಟ್ ಥಾಮಸ್ ಆಸ್ಪತ್ರೆಯಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಬ್ ತಿಳಿಸಿದ್ದಾರೆ.