ETV Bharat / international

ಬ್ರೆಜಿಲ್‌ನಲ್ಲಿ ಕೋವಿಡ್​ ಅಟ್ಟಹಾಸ : ಒಂದೇ ದಿನ 90 ಸಾವಿರ ಹೊಸ ಕೇಸ್

ಬ್ರೆಜಿಲ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 90,570 ಹೊಸ ಕೋವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,18,71,390 ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

COVID-19 cases in Brazil rise by record 90,570 to over 11.87 million: Ministry
ಬ್ರೆಜಿಲ್‌ನಲ್ಲಿ ಕೋವಿಡ್​ ಅಟ್ಟಹಾಸ
author img

By

Published : Mar 20, 2021, 9:22 AM IST

ಬ್ರೆಸಿಲಿಯಾ (ಬ್ರೆಜಿಲ್) : ಬ್ರೆಜಿಲ್‌ನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 90,570 ಹೊಸ ಕೋವಿಡ್​-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,18,71,390 ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಸಮಯದಲ್ಲಿ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡಿದ್ದು ಹೊಸದಾಗಿ 2,815 ಜನ ಮೃತಪಟ್ಟಿದ್ದು, ಮೃತರ ಸಂಖ್ಯೆ 2,90,314ಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್​-19 ಸೋಂಕಿನಿಂದ 10.38 ದಶಲಕ್ಷಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದಾರೆ. ಒಂದು ದಿನ ಮುಂಚೆ, ಬ್ರೆಜಿಲ್​ನಲ್ಲಿ ಸುಮಾರು 87,000 ಹೊಸ ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 2,700 ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.