ETV Bharat / international

ಉಕ್ರೇನ್​- ರಷ್ಯಾ ಯುದ್ಧ ಸಂಧಾನಕ್ಕೆ ಬೆಲಾರಸ್​ ಪೌರೋಹಿತ್ಯ.. ಮಾತುಕತೆಗೆ ಸಜ್ಜಾದ ವೇದಿಕೆ.. - ಯುದ್ಧ ಸಂಧಾನಕ್ಕೆ ವೇದಿಕೆ ಸಜ್ಜು

ರಷ್ಯಾ-ಉಕ್ರೇನ್ ಮಧ್ಯೆ ಯುದ್ಧ ಸಂಧಾನ ನಡೆಸಲು ಎಲ್ಲವೂ ಸಿದ್ಧವಾಗಿದೆ. ಉಭಯ ರಾಷ್ಟ್ರಗಳ ನಿಯೋಗಗಳ ಬರುವಿಕೆಗಾಗಿ ಕಾಯಲಾಗುತ್ತಿದೆ ಎಂದು ಬೆಲಾರಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್​ ಮಾಡಿದೆ..

ukraine-negotiations
ಯುದ್ಧ ಸಂಧಾನಕ್ಕೆ
author img

By

Published : Feb 28, 2022, 1:35 PM IST

ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಪರಮಾಣು ದಾಳಿ ಬೆದರಿಕೆಯ ಬಳಿಕ ಉಕ್ರೇನ್​ ಶಾಂತಿ ಮಾತುಕತೆಗೆ ಒಪ್ಪಿಗೆ ನೀಡಿದ್ದು, ಬೆಲಾರಸ್​ ಗಡಿಯಲ್ಲಿ ಉಭಯ ರಾಷ್ಟ್ರಗಳ ನಿಯೋಗ ಮಾತುಕತೆಗೆ ಮುಂದಾಗಲಿವೆ. ಸಂಧಾನಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ನಿಯೋಗಗಳ ಆಗಮನಕ್ಕೆ ಕಾದಿದ್ದೇವೆ ಎಂದು ಬೆಲಾರಸ್​ ಸರ್ಕಾರ ತಿಳಿಸಿದೆ.

ರಷ್ಯಾ-ಉಕ್ರೇನ್ ಮಧ್ಯೆ ಯುದ್ಧ ಸಂಧಾನ ನಡೆಸಲು ಎಲ್ಲವೂ ಸಿದ್ಧವಾಗಿದೆ. ಉಭಯ ರಾಷ್ಟ್ರಗಳ ನಿಯೋಗಗಳ ಬರುವಿಕೆಗಾಗಿ ಕಾಯಲಾಗುತ್ತಿದೆ ಎಂದು ಬೆಲಾರಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್​ ಮಾಡಿದೆ.

ರಷ್ಯಾದೊಂದಿಗೆ ಮಾತುಕತೆ ನಡೆಸಲು ಉಕ್ರೇನಿಯನ್ ನಿಯೋಗ ಬೆಲಾರಸ್‌ಗೆ ತಲುಪಿದೆ. ಇನ್ನು ರಷ್ಯಾದ ವಿದೇಶಾಂಗ, ರಕ್ಷಣೆ ಮತ್ತು ಅಧ್ಯಕ್ಷರ ಕಚೇರಿ ಅಧಿಕಾರಿಗಳನ್ನೊಳಗೊಂಡ ನಿಯೋಗ ಕೂಡ ಬೆಲಾರಸ್​ನಲ್ಲಿದೆ ಎಂದು ತಿಳಿದು ಬಂದಿದೆ. ಉಭಯ ದೇಶಗಳ ಮಧ್ಯೆ ಯುದ್ಧ ಆರಂಭವಾದ ಬಳಿಕ ನಡೆಯುತ್ತಿರುವ ಮೊದಲ ಸಂಧಾನ ಸಭೆ ಇದಾಗಿದೆ.

ಓದಿ: ರಷ್ಯಾ-ಉಕ್ರೇನ್‌ ಯುದ್ಧದಲ್ಲಿ ಅಮೆರಿಕ ಡಬಲ್‌ ಗೇಮ್‌.. ಉತ್ತರ ಕೊರಿಯಾ ಹೀಗಂತು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.