ಬರ್ಲಿನ್(ಜರ್ಮನ್): ಈ ಹಿಂದೆ ಅಫ್ಘಾನಿಸ್ತಾನದಲ್ಲಿ ಮಾಹಿತಿ ತಂತ್ರಜ್ಞಾನ ಸಚಿವನಾಗಿ ಸೇವೆ ಸಲ್ಲಿಸಿದ್ದ ಸೈಯದ್ ಅಹ್ಮದ್ ಶಾ ಸಾದೀತ್ ಇದೀಗ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂಬ ಸುದ್ದಿಯೊಂದು ವರದಿಯಾಗಿದ್ದು, ಇದಕ್ಕೆ ಪುಷ್ಟಿ ನೀಡುವ ಅವರ ಕೆಲವೊಂದು ಫೋಟೋಗಳು ವೈರಲ್ ಆಗಿವೆ.
ಜರ್ಮನಿಯ ಲೀಪ್ಜಿಗ್ ನಗರದಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸುತ್ತಿರುವ ಫೋಟೋ ವೈರಲ್ ಆಗಿದೆ. 2018ರಲ್ಲಿ ಅಶ್ರಫ್ ಘನಿ ನೇತೃತ್ವದ ಸರ್ಕಾರದಲ್ಲಿ ಸೈಯದ್ ಅಹ್ಮದ್ ಶಾ ಸಚಿವರಾಗಿ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು, 2020ರಲ್ಲಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಅದೇ ವರ್ಷದ ಡಿಸೆಂಬರ್ ತಿಂಗಳಲ್ಲಿ ಜರ್ಮನಿಗೆ ಬಂದು ನೆಲೆಸಿದ್ದರು.
ಆಕ್ಸ್ಫರ್ಡ್ ವಿಶ್ವವಿದ್ಯಾಲಯದಿಂದ ಕಮ್ಯುನಿಕೇಷನ್ ಹಾಗೂ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ನಲ್ಲಿ ಡಿಗ್ರಿ ಪಡೆದುಕೊಂಡಿರುವ ಇವರು, ಸದ್ಯ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಜರ್ಮನ್ ಪತ್ರಕರ್ತರೊಬ್ಬರು ಇವರ ಕೆಲವೊಂದು ಫೋಟೋ ಶೇರ್ ಮಾಡಿದ್ದಾರೆ. ಅವರನ್ನು ಮಾತನಾಡಿಸಿದಾಗ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿರುವುದಾಗಿ ಹೇಳಿದ್ದಾರೆಂದು ಬರೆದುಕೊಂಡಿದ್ದಾರೆ.
-
Vor ein paar Tagen lernte ich einen Mann kennen, der behauptete, vor zwei Jahren afghanischer Kommunikationsminister gewesen zu sein. Ich fragte, was er in #Leipzig mache. „Ich fahre für Lieferando Essen aus.“ pic.twitter.com/nafutTTXqP
— Josa Mania-Schlegel (@JosaMania) August 21, 2021 " class="align-text-top noRightClick twitterSection" data="
">Vor ein paar Tagen lernte ich einen Mann kennen, der behauptete, vor zwei Jahren afghanischer Kommunikationsminister gewesen zu sein. Ich fragte, was er in #Leipzig mache. „Ich fahre für Lieferando Essen aus.“ pic.twitter.com/nafutTTXqP
— Josa Mania-Schlegel (@JosaMania) August 21, 2021Vor ein paar Tagen lernte ich einen Mann kennen, der behauptete, vor zwei Jahren afghanischer Kommunikationsminister gewesen zu sein. Ich fragte, was er in #Leipzig mache. „Ich fahre für Lieferando Essen aus.“ pic.twitter.com/nafutTTXqP
— Josa Mania-Schlegel (@JosaMania) August 21, 2021
ಕಳೆದ ಕೆಲ ವರ್ಷಗಳಿಂದ ಅಫ್ಘಾನಿಸ್ತಾನದಲ್ಲಿ ಅಮೆರಿಕ ಸೇನೆ ನಿಯೋಜನೆ ಮಾಡಲಾಗಿತ್ತು. ಇದೀಗ ಬೈಡನ್ ಸರ್ಕಾರ ಅದನ್ನು ಹಿಂಪಡೆದುಕೊಳ್ಳುತ್ತಿದ್ದಂತೆ ತಾಲಿಬಾನಿಗಳು ಸಂಪೂರ್ಣವಾಗಿ ಆಫ್ಘನ್ ಮೇಲೆ ಹಿಡಿತ ಸಾಧಿಸಿ, ತಮ್ಮ ಹತೋಟಿಗೆ ತೆಗೆದುಕೊಂಡಿವೆ. ಇದರ ಬೆನ್ನಲ್ಲೇ ಅಲ್ಲಿನ ಅಧ್ಯಕ್ಷರಾಗಿದ್ದ ಅಶ್ರಫ್ ಘನಿ ಸಹ ದೇಶ ಬಿಟ್ಟು ಪರಾರಿಯಾಗಿದ್ದಾರೆ.
ತಾಲಿಬಾನಿಗಳು ವಿವಿಧ ನಗರಗಳಲ್ಲಿ ಗುಂಡಿನ ಅಟ್ಟಹಾಸ ಮೆರೆದು, ರಕ್ತದೋಕುಳಿ ನಡೆಸಿದ್ದಾರೆ. ಇದೇ ಕಾರಣಕ್ಕಾಗಿ ಅನೇಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದೇ ವಿಷಯವಾಗಿ ಪ್ರಧಾನಿ ನರೇಂದ್ರ ಮೋದಿ ನಿನ್ನೆ ದೂರವಾಣಿ ಮೂಲಕ ರಷ್ಯಾದ ಅಧ್ಯಕ್ಷರೊಂದಿಗೆ ಮಾತುಕತೆ ಸಹ ನಡೆಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸದ್ಯ ಪರಿಸ್ಥಿತಿ ಗಂಭೀರವಾಗಿದ್ದು, ಎಲ್ಲ ನಗರಗಳ ಮೇಲೆ ತಾಲಿಬಾನ್ ಹತೋಟಿ ಸಾಧಿಸಿದೆ. ಇದೇ ಕಾರಣಕ್ಕಾಗಿ ಭಾರತ ಸೇರಿದಂತೆ ವಿವಿಧ ದೇಶಗಳು ಅದರೊಂದಿಗಿನ ಸಂಪರ್ಕ ಕಡಿತಗೊಳಿಸಿಕೊಂಡಿವೆ. ಅಲ್ಲಿ ವಾಸವಾಗಿದ್ದ ಭಾರತೀಯರು ಈಗಾಗಲೇ ಸೇಫ್ ಆಗಿ ವಾಪಸ್ ಆಗಿದ್ದಾರೆ.