ಲಂಡನ್: ಪ್ರಪಂಚದಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು, ಈವರೆಗೆ ಜಗತ್ತಿನಾದ್ಯಂತ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಸೋಂಕಿಗೆ ಬಲಿಯಾಗಿದ್ದಾರೆ.
ವಿಶ್ವದಲ್ಲಿ ಸೋಂಕಿತರ ಸಂಖ್ಯೆ 70,13,742ಕ್ಕೆ ಏರಿಕೆಯಾಗಿದೆ. 4,02,746ಕ್ಕೂ ಹೆಚ್ಚು ಜನ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ 34,30,736 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 31,80,260 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ನಡೆಯುತ್ತಿದೆ.
ಅಮೆರಿಕಾದಲ್ಲಿ ಈವರೆಗೆ 1,12,113 ಮಂದಿ ಕೊರೊನಾಗೆ ಬಲಿಯಾಗಿದ್ದು, 19,90,046 ಜನರಿಗೆ ಮಹಾಮಾರಿ ಸೋಂಕು ತಗುಲಿದೆ. ಬ್ರೆಜಿಲ್ನಲ್ಲಿ 36,044 ಜನ ಸಾವನ್ನಪ್ಪಿದ್ದರೆ, 6,76,494 ಕೊರೊನಾ ಪ್ರಕರಣಗಳು ದೇಶದಲ್ಲಿ ಬೆಳಕಿಗೆ ಬಂದಿವೆ.
ಜಾಗತಿಕ ಕೊರೊನಾ ಪ್ರಕರಣಗಳ ಪಟ್ಟಿಯಲ್ಲಿ ಭಾರತ 6ನೇ ಸ್ಥಾನದಲ್ಲಿದ್ದು, 6,929 ಜನ ಸಾವನ್ನಪ್ಪಿದ್ದಾರೆ. ಈವರೆಗೆ ದೇಶದಲ್ಲಿ ಒಟ್ಟು 2,46,628 ಕೋವಿಡ್-19 ಪ್ರಕರಣಗಳು ವರದಿಯಾಗಿವೆ.