ಓಸ್ಲೋ: ಹವಾಮಾನ ವೈಪರೀತ್ಯ ಕುರಿತಂತೆ ಜನ ಜಾಗೃತಿ ಮೂಡಿಸುವ ಕೆಲಸದಲ್ಲಿ ನಿರತರಾಗಿರುವ ಸ್ವೀಡನ್ನ ಪರಿಸರ ಕಾರ್ಯಕರ್ತೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಹವಾಮಾನ ಕಾರ್ಯಕರ್ತೆ ಗ್ರೆಟಾ ಥನ್‌ಬರ್ಗ್ ಹೆಸರು ಈ ಬಾರಿಯ ನೊಬೆಲ್ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದೆ.
ಹವಾಮಾನ ಬಿಕ್ಕಟ್ಟಿನ ವಿರುದ್ಧ ಹೋರಾಟ ನಡೆಸಿದವರಲ್ಲಿ ಥನ್‌ಬರ್ಗ್ ಅಗ್ರಗಣ್ಯ. ಇವರು ನೂರಾರು ಶಾಲೆಗಳಿಗೆ ತೆರಳಿ ಸಾವಿರಾರು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಿದ್ದಾರೆ. ಜೊತೆಗೆ ಹವಾಮಾನ ಬದಲಾವಣೆ ಕುರಿತು ಕ್ರಮ ಕೈಗೊಳ್ಳುವಂತೆ ನಾಯಕರಲ್ಲಿ ಮನವಿ ಮಾಡಿ ಈ ಹಿಂದೆ ಪ್ರತಿಭಟನೆಯನ್ನು ಸಹ ನಡೆಸಿದ್ದಾರೆ. ಜೊತೆಗೆ ಕೊರೊನಾ ವೈರಸ್ ನಿಯಂತ್ರಣದ ಕುರಿತು ಜಾಗೃತಿ ಮೂಡಿಸಿರುವುದು ಮತ್ತು ಬಡ ದೇಶಗಳಿಗೆ ಕೊರೊನಾ ಲಸಿಕೆ ಹಂಚಿಕೆಯಲ್ಲಿ ಇವರು ಮಾಡಿರುವ ಕಾರ್ಯವನ್ನು ಗುರುತಿಸಿ ಥನ್‌ಬರ್ಗ್ ಹೆಸರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ.
ಇನ್ನು ನಾರ್ವೇಜಿಯನ್ ನೊಬೆಲ್ ಸಮಿತಿ ಪ್ರತಿ ವರ್ಷ ಶಾಂತಿ ನೊಬೆಲ್ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡುತ್ತದೆ.