ETV Bharat / international

UNGC ವೇಳೆ ಜಾನ್ಸನ್​ - ಬೈಡನ್​ ದ್ವಿಪಕ್ಷೀಯ ಮಾತುಕತೆ ಸಾಧ್ಯತೆ - ಅಮೆರಿಕ ಅಧ್ಯಕ್ಷ ಜೋ ಬೈಡನ್​

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಹಾಗೂ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ದ್ವಿಪಕ್ಷೀಯ ಸಂಬಂಧ ಮಾತುಕತೆ ನಡೆಸುವ ಸಾಧ್ಯತೆಯಿದೆ.

ಬೈಡನ್​-ಜಾನ್ಸನ್​
ಬೈಡನ್​-ಜಾನ್ಸನ್​
author img

By

Published : Sep 13, 2021, 11:07 AM IST

ಲಂಡನ್: ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್​ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA) ಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಈ ಸಭೆಯು ಶ್ವೇತ ಭವನದಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

76 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆ, ಸೆಪ್ಟೆಂಬರ್ 14 ರಂದು ಆರಂಭವಾಗುತ್ತಿದೆ. ಉನ್ನತ ಮಟ್ಟದ ಸಭೆಯು ಸೆಪ್ಟೆಂಬರ್ 21 ರಿಂದ 27 ರವರೆಗೆ ನಡೆಯಲಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೋರಿಸ್ ಜಾನ್ಸನ್​ ನಾಲ್ಕು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಮಯದಲ್ಲಿ ಜಾನ್ಸನ್​ ಮತ್ತು ಬೈಡನ್​ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಚೀನಾದಲ್ಲಿ ಮತ್ತೆ ಏಕಾಏಕಿ ಕೋವಿಡ್ ಸ್ಫೋಟ.. 46 ಪ್ರಕರಣಗಳು ಪತ್ತೆ

ಚೀನಾ ವಿಚಾರದಲ್ಲಿ ಇಂಗ್ಲೆಂಡ್​ ಮೃದು ಧೋರಣೆ ಹೊಂದುವ ಸಾಧ್ಯತೆಯಿದೆ ಎಂದು ಬೈಡನ್​ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ರಷ್ಯಾ, ಚೀನಾಗಳ ಹವಾಮಾನ ಬದಲಾವಣೆಯಂತಹ ವಿಷಯಗಳ ಮೇಲೆ ಲಂಡನ್ ಪ್ರಭಾವ ಬೀರಲು ಬಯಸಿದ್ರೆ, ಅದು ಸಾಧ್ಯವಿಲ್ಲ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.