ಲಂಡನ್(ಇಂಗ್ಲೆಂಡ್): ವಿಶ್ವಗುರು ಬಸವ ಜಯಂತಿ ಹಿನ್ನೆಲೆಯಲ್ಲಿ ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ 887ನೇ ಬಸವ ಜಯಂತಿಯ ಶುಭಾಶಯ ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಲಂಡನ್‌ನ ಲ್ಯಾಂಬೆತ್ ಬಸವೇಶ್ವರ ಫೌಂಡೇಶನ್ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಶಿಫಾರಸು ಮಾಡುತ್ತಿದೆ. ಕೊರೊನಾ ರೋಗ ಹರಡುವುದನ್ನು ತಡೆಗಟ್ಟಲು ಬಸವೇಶ್ವರರ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಫೌಂಡೇಷನ್ ಮುಖ್ಯಸ್ಥ ಡಾ. ನೀರಜ್ ಪಾಟೀಲ್ ತಿಳಿಸಿದ್ದಾರೆ.
ನಾವು ಕಟ್ಟುನಿಟ್ಟಾದ ಸಾಮಾಜಿಕ ಅಂತರವನ್ನು ಶಿಫಾರಸು ಮಾಡುತ್ತಿದ್ದೇವೆ. ಆಗಾಗ ಕೈ ತೊಳೆಯುವುದು ಮತ್ತು ಆರೋಗ್ಯ ಕಾರ್ಯಕರ್ತರನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದು, ಮನೆಯಲ್ಲೇ ಇರಿ, ಸುರಕ್ಷಿತವಾಗಿರಿ ಎಂದು ಸಂದೇಶ ನೀಡಿದ್ದಾರೆ.