ಜಿನೀವಾ (ಸ್ವಿಜರ್ಲ್ಯಾಂಡ್): ಕೋವಿಡ್-19 ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ಹೇರಿದ ಲಾಕ್ಡೌನ್ ಹಾಗೂ ನಿರ್ಬಂಧಗಳನ್ನು ತ್ವರಿತವಾಗಿ ತೆಗೆದುಹಾಕುವುದು ಮಾರಣಾಂತಿಕ ಪರಿಣಾಮ ಬೀರಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
"ಶೀಘ್ರವಾಗಿ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾವುದನ್ನೇ ವಿಶ್ವ ಆರೋಗ್ಯ ಸಂಸ್ಥೆ ಬಯಸಿದೆ. ಆದರೆ, ಹಾಗೆ ಮಾಡುವುದರಿಂದ ಮಾರಣಾಂತಿಕ ಪರಿಣಾಮವಾಗಲಿದೆ" ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಹೇಳಿದರು.
"ಸರಿಯಾದ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳದಿದ್ದರೆ, ಅಪಾಯ ಎದುರಾಗಲಿದೆ" ಎಂದು ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ಎಚ್ಚರಿಸಿದ್ದಾರೆ.