ETV Bharat / international

ರಷ್ಯಾ- ಉಕ್ರೇನ್ ಯುದ್ಧ: ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ.. - ರಷ್ಯಾ ಉಕ್ರೇನ್ ಸುದ್ದಿ

ರಷ್ಯಾವು ಉಕ್ರೇನ್‌ ವಿರುದ್ಧ ತನ್ನ ಹೋರಾಟವನ್ನು ತೀವ್ರಗೊಳಿಸಿದ್ದು, ಒಂಬತ್ತನೇ ದಿನದ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ ನೋಡಿ.

ರಷ್ಯಾ- ಉಕ್ರೇನ್
ರಷ್ಯಾ- ಉಕ್ರೇನ್
author img

By

Published : Mar 5, 2022, 7:46 AM IST

ರಷ್ಯಾ-ಉಕ್ರೇನ್ ಮಧ್ಯೆ ಭೀಕರ ಸಂಘರ್ಷ ನಡೆಯುತ್ತಿದೆ. ಈಗಾಗಲೇ ಸಾವಿರಾರು ಯೋಧರು, ನಾಗರಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದು, ಇದರ ಜೊತೆಗೆ ಸಾವಿರಾರು ಜನ ಗಾಯಗೊಂಡಿದ್ದಾರೆ. ರಷ್ಯಾದ ಉಕ್ರೇನ್ ಆಕ್ರಮಣದ ಒಂಬತ್ತನೇ ದಿನದ ಪ್ರಮುಖ ಬೆಳವಣಿಗೆಗಳ ಮಾಹಿತಿ ಇಲ್ಲಿದೆ ನೋಡಿ.

  1. ಫೇಸ್‌ಬುಕ್‌, ಟ್ವಿಟರ್, ಯೂಟ್ಯೂಬ್‌ ಸೇರಿದಂತೆ ಹಲವು ಸಾಮಾಜಿಕ ಮಾಧ್ಯಮಗಳನ್ನು ರಷ್ಯಾದಲ್ಲಿ ನಿರ್ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಸ್ಕೋ ಹೇಳಿದೆ.
  2. ರಾಷ್ಯದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ರಷ್ಯಾದ ಸಶಸ್ತ್ರ ಪಡೆಗಳ ಬಗ್ಗೆ ಸುಳ್ಳು ಮಾಹಿತಿ ಹರಡುವವರ ವಿರುದ್ಧ ಕ್ರಮಕೈಗೊಂಡಿದ್ದು, 15 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಸೂದೆಗೆ ಸಹಿ ಹಾಕಿದ್ದಾರೆ.
  3. ರಷ್ಯಾ ಸೇನೆ ಕಂಡು ಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿದೆ. ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿ ಬಿಟ್ಟಿವೆ. ಉಕ್ರೇನ್‌ನ ಉತ್ತರ, ಪೂರ್ವ ಮತ್ತು ದಕ್ಷಿಣದಲ್ಲಿ ಭಾರಿ ಹೋರಾಟ ಮುಂದುವರೆದಿದೆ.
  4. ಕೀವ್ ಜೂನಲ್ಲಿನ ಪ್ರಾಣಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಷ್ಟೇ ಅಲ್ಲದೆ, ಸಾವಿರಾರು ಉಕ್ರೇನಿಯನ್ ನಿರಾಶ್ರಿತರು ಯುದ್ಧಪೀಡಿತ ದೇಶದಿಂದ ವಲಸೆ ಮುಂದುವರೆಸಿದ್ದಾರೆ.
  5. ಉಕ್ರೇನ್‌ನ ಪ್ರಮುಖ ಪರಮಾಣು ಸ್ಥಾವರದಲ್ಲಿ ಗುರುವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಯೂಕ್ರೇನ್​ನಲ್ಲಿರುವ ಯುರೋಪ್​ನ ಅತಿ ದೊಡ್ಡ ಪರಮಾಣು ವಿದ್ಯುತ್ ಸ್ಥಾವರ ಝಪೊರಿಝಿಯಾ ಮೇಲೆ ರಷ್ಯಾ ಶೆಲ್​ ದಾಳಿ ನಡೆಸಲಾಗಿದೆ ಎಂದು ಯುಎಸ್ ಆರೋಪಿಸಿದೆ.
  6. ಉಕ್ರೇನ್‌ನ ಪರಮಾಣು ವಿದ್ಯುತ್ ಸ್ಥಾವರದ ಮೇಲೆ‌ ರಷ್ಯಾ ದಾಳಿ ಮಾಡಿದ ಬೆನ್ನಲ್ಲೇ ಅಂತಾರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆಯೊಂದಿಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾತುಕತೆ ನಡೆಸಿದ್ದಾರೆ.
  7. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ರಷ್ಯಾಕ್ಕೆ ಉಕ್ರೇನ್​ ಮೇಲೆ ಮಾಡುತ್ತಿರುವ ಆಕ್ರಮಣವನ್ನು ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ ಎಂದು ಶ್ವೇತಭವನವು ಹೇಳಿಕೆಯಲ್ಲಿ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.