ವಾಷಿಂಗ್ಟನ್ (ಅಮೆರಿಕ): ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧದಿಂದ ಉಂಟಾಗಿರುವ ಬಿಕ್ಕಟ್ಟಿನ ಮಧ್ಯೆಯೂ ರಷ್ಯಾ ಬಾಹ್ಯಾಕಾಶ ಸಂಸ್ಥೆಯೊಂದಿಗೆ ತನ್ನ ಕಾರ್ಯ ಹಾಗೆ ಮುಂದುವರೆಯಲಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಸ್ಪಷ್ಟಪಡಿಸಿದೆ.
ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿರುವ ಪರಿಣಾಮ ಅಮೆರಿಕ ಸೇರಿದಂತೆ ಇತರ ರಾಷ್ಟ್ರಗಳು ರಷ್ಯಾ ವಿರುದ್ಧ ಸಾಕಷ್ಟು ನಿರ್ಬಂಧಗಳನ್ನು ಹೇರುತ್ತಿವೆ. ಇದರಿಂದ ಕೆರಳಿರುವ ರಷ್ಯಾ ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಮೇಲೂ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಿದೆ.
ಇದರ ಬೆನ್ನಲ್ಲೆಯಲ್ಲಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದಿಂದ ಇಂತಹ ಪ್ರತಿಕ್ರಿಯೆ ಹೊರಬಿದ್ದಿದೆ. ನಾಸಾವು ತನ್ನ ಅಂತಾರಾಷ್ಟ್ರೀಯ ಎಲ್ಲ ಪಾಲುದಾರರೊಂದಿಗೆ ಕೆಲಸ ಮಾಡಲಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಸುರಕ್ಷಿತ ಕಾರ್ಯಾಚರಣೆಗಳಿಗಾಗಿ ರಷ್ಯಾ ಬಾಹ್ಯಾಕಾಶ ಸಂಸ್ಥೆಯಾದ ರೋಸ್ಕೊಸ್ಮೊಸ್ನೊಂದಿಗೂ ನಾಸಾ ತನ್ನ ಕೆಲಸವನ್ನು ಮುಂದುವರೆಸಲಿದೆ ಎಂದು ನಾಸಾದ ವಕ್ತಾರ ಡಾನ್ ಹುಟ್ ಹೇಳಿದ್ದಾರೆ.
ಕಕ್ಷೆ ಮತ್ತು ಭೂಮಿ ಮೇಲಿನ ಕಾರ್ಯಾಚರಣೆಗಳ ಸಂಬಂಧ ಸಂಸ್ಥೆಗಳಿಗೆ ನೀಡುವ ಬೆಂಬಲದಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ. ಅಮೆರಿಕ - ರಷ್ಯಾ ನಾಗರಿಕ ಬಾಹ್ಯಾಕಾಶದ ಹೊಸ ರಫ್ತುನಿಯಂತ್ರಣ ಕ್ರಮಗಳಿಗೆ ಸಹಕಾರ ಮುಂದುವರಿಯುತ್ತದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: ಉಭಯ ದೇಶಗಳ ನಡುವೆ ಮಾತುಕತೆ ಮಧ್ಯೆಯೇ ಉಕ್ರೇನ್ ಮೇಲೆ ರಷ್ಯಾ ದಾಳಿ.. ನಾಗರಿಕರ ನರಳಾಟ, ನ್ಯಾಟೋ ಕೆರಳಿಸಿದ ರಷ್ಯಾ!