ಲಂಡನ್: ಭಾರತೀಯ ದೂತವಾಸ ಕಚೇರಿಯ ಭದ್ರತೆ ಬಗ್ಗೆ ದನಿ ಎತ್ತಿದ ಕೆಲ ದಿನದಲ್ಲೇ ಲಂಡನ್ನಲ್ಲಿರುವ ಭಾರತೀಯ ದೂತವಾಸದ ಕಚೇರಿ ಮೇಲೆ ಪಾಕಿಸ್ತಾನಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದಾರೆ.
ಆಗಸ್ಟ್ 15ರಂದು ಲಂಡನ್ನಲ್ಲಿರುವ ಭಾರತೀಯ ದೂತವಾಸ ಕಚೇರಿ ಹೊರಭಾಗದಲ್ಲಿ ಪಾಕ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದರು. ಮಂಗಳವಾರದಂದು ಪಾಕಿಸ್ತಾನಿ ಬೆಂಬಲಿಗರು ಭಾರತೀಯ ಹೈಕಮಿಷನ್ ಕಚೇರಿ ಹೊರಗಡೆ ಪ್ರತಿಭಟನೆ ನಡೆಸಿ ಕಲ್ಲು ತೂರಿದ್ದಾರೆ ಎಂದು ಲಂಡನ್ನ ಭಾರತೀಯ ಹೈಕಮಿಷನ್ ಟ್ವೀಟ್ ಮಾಡಿದೆ. ಕಚೇರಿಗೆ ಹಾನಿಯಾಗಿದೆ ಎಂದು ಫೋಟೋ ಸಹಿತ ಟ್ವೀಟ್ ಮಾಡಿ ಉಲ್ಲೇಖಿಸಿದೆ.
-
Another violent protest outside the Indian High Commission in London today, 3 September 2019. Damage caused to the premises. @foreignoffice @UKinIndia @MEAIndia @DominicRaab @DrSJaishankar @PMOIndia @tariqahmadbt pic.twitter.com/2sv0Qt1xy8
— India in the UK (@HCI_London) September 3, 2019 " class="align-text-top noRightClick twitterSection" data="
">Another violent protest outside the Indian High Commission in London today, 3 September 2019. Damage caused to the premises. @foreignoffice @UKinIndia @MEAIndia @DominicRaab @DrSJaishankar @PMOIndia @tariqahmadbt pic.twitter.com/2sv0Qt1xy8
— India in the UK (@HCI_London) September 3, 2019Another violent protest outside the Indian High Commission in London today, 3 September 2019. Damage caused to the premises. @foreignoffice @UKinIndia @MEAIndia @DominicRaab @DrSJaishankar @PMOIndia @tariqahmadbt pic.twitter.com/2sv0Qt1xy8
— India in the UK (@HCI_London) September 3, 2019
ಈ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಲಂಡನ್ ಮೇಯರ್ ಸಾದಿಕ್ ಖಾನ್, ಘಟನೆಯನ್ನು ಖಂಡಿಸಿದ್ದಾರೆ. ಇಂತಹ ನಡೆಯನ್ನು ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಮೂಲಗಳ ಪ್ರಕಾರ ಪ್ರತಿಭಟನೆ ವೇಳೆ ಪಾಕ್ ಬೆಂಬಲಿಗರು ಮೊಟ್ಟೆ, ಶೂ ಹಾಗೂ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಕಚೇರಿಯ ಗಾಜು ಹಾನಿಗೊಂಡಿದೆ.