ವ್ಯಾಟಿಕನ್ ಸಿಟಿ(ಇಟಲಿ): ರೋಮ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ವ್ಯಾಟಿಕನ್ ನಗರಕ್ಕೆ ಆಗಮಿಸಿದ್ದು, ಕ್ರೈಸ್ತ ಧರ್ಮದ ಪರಮೋಚ್ಛ ಗುರು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಪೋಪ್ ಅವರ ಭೇಟಿ ಬಳಿಕ ಪ್ರತಿಕ್ರಿಯಿಸರುವ ಪ್ರಧಾನಿ ಮೋದಿ, ಪೋಪ್ ಫ್ರಾನ್ಸಿಸ್ ಅವರೊಂದಿಗೆ ಅತ್ಯಂತ ಆತ್ಮೀಯ ಭೇಟಿ ಇದಾಗಿದ್ದು, ಅವರೊಂದಿಗೆ ಹಲವು ವಿಷಯಗಳ ಬಗ್ಗೆ ಚರ್ಚಿಸಲು ನನಗೆ ಅವಕಾಶ ಸಿಕ್ಕಿತು. ಭಾರತಕ್ಕೆ ಭೇಟಿ ನೀಡುವಂತೆ ಅವರನ್ನು ಆಹ್ವಾನಿಸಿದ್ದೇನೆ ಎಂದು ಹೇಳಿದ್ದಾರೆ.

ರೋಮ್‌ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸ ಕೈಗೊಂಡಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪ್ರಧಾನಿ ಅವರ ನಿಯೋಗದಲ್ಲಿದ್ದಾರೆ.
